LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್ ಯುಜಿ 2024: ಆಕಾಶ್ ಬೆಂಗಳೂರು ಶಾಖೆಯ 21 ವಿದ್ಯಾರ್ಥಿಗಳು ಟಾಪರ್

ಬೆಂಗಳೂರು: ನೀಟ್ ,ಯುಜಿ 2024ರ ಪರೀಕ್ಷೆಯಲ್ಲಿ ಆಕಾಶ್ ಎಜುಕೇಶನಲ್ ಸರ್ವಿಸ್ ಲಿಮಿಟೆಡ್ ಬೆಂಗಳೂರು ಶಾಖೆಯ ಒಟ್ಟು 21 ವಿದ್ಯಾರ್ಥಿಗಳು ಹತ್ತಿನತಾ ಶ್ರೇಣಿಯಲ್ಲಿ ತೆರಗಡೆಯಾಗಿದ್ದಾರೆಂದು ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (AESL) ಸಂಸ್ಥೆಯ ಮುಖ್ಯ ಶೈಕ್ಷಣಿಕ ಮತ್ತು ವ್ಯವಹಾರ ಮುಖ್ಯಸ್ಥರಾದ ಧೀರಜ್ ಕುಮಾರ್ ಮಿಶ್ರಾ ತಿಳಿಸಿದರು.

ಬೆಂಗಳೂರಿನ ರಾಜಾಜಿನಗರದಲ್ಲಿರುವ ಆಕಾಶ್ ಎಜುಕೇಶನಲ್ ಇನ್ಸ್ಟಿಟ್ಯೂಟ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆಕಾಶ ಸಂಸ್ಥೆಯಲ್ಲಿ ಬೆಂಗಳೂರು ಶಾಖೆಯ 21 ವಿದ್ಯಾರ್ಥಿಗಳು ಪ್ರತಿಷ್ಠಿತ NEET UG 2024 ಪರೀಕ್ಷೆಯಲ್ಲಿ 690 ಹಾಗೂ ಹೆಚ್ಚಿನ ಅಂಕಗಳನ್ನು ಗಳಿಸಿ, ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಗಮನಾರ್ಹ ಸಾಧನೆಯು ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು AESL ಒದಗಿಸಿದ ಉತ್ಕೃಷ್ಟ ಗುಣಮಟ್ಟದ ತರಬೇತಿಗೆ ಸಾಕ್ಷಿಯಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಫಲಿತಾಂಶ ಪ್ರಕಟಿಸಲಾಗಿದೆ ಎಂದರು.

ಆಕಾಶ್ ಸಂಸ್ಥೆಯ ವಿದ್ಯಾರ್ಥಿಗಳು ಗಳಿಸಿದ ಅಂಕಗಳು

ಪದ್ಮನಾಭ್ ಮೆನನ್ ಅವರು 716 ಅಂಕಗಳೊಂದಿಗೆ AIR 74 (ಅಖಿಲ ಭಾರತ ಶ್ರೇಯಾಂಕ) ಗಳಿಸಿದ್ದಾರೆ. ಪಿ. ನಂದನ್ ಅವರು 715 ಅಂಕಗಳೊಂದಿಗೆ AIR 173, ಪ್ರೀತಂ ಆರ್.ಪಿ. ಅವರು 715 ಅಂಕಗಳೊಂದಿಗೆ AIR 141, ಸಾನ್ವಿ ಜೈನ್ 715 ಅಂಕಗಳೊಂದಿಗೆ AIR 189, ತೃಪ್ತಿ ಜಿ.ಎಂ. ಅವರು 711 ಅಂಕಗಳೊಂದಿಗೆ AIR 334 ಹಾಗೂ ಋಷಿ ಅವರು 710 ಅಂಕಗಳೊಂದಿಗ AIR 354 ಗಳಿಸಿ, ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ದೇಶದೆಲ್ಲೆಡೆಯ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು NEET 2024 ಪರೀಕ್ಷೆಗೆ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆಯು ಅವರ ಕಠಿಣ ಪರಿಶ್ರಮ ಮತ್ತು ಸಮರ್ಪಣೆ ಮತ್ತು ಅವರ ಹೆತ್ತವರ ಬೆಂಬಲವನ್ನು ಬಣ್ಣಿಸುತ್ತದೆ. ನಮ್ಮ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಮಾಡುವ ಎಲ್ಲ ಪ್ರಯತ್ನಗಳಿಗೆ ನಾವು ಶುಭ ಹಾರೈಸುತ್ತೇವೆ" ಎಂದರು.

ಭಾರತದಲ್ಲಿ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವೈದ್ಯಕೀಯ (MBBS), ದಂತ ವೈದ್ಯಕೀಯ (BDS) ಮತ್ತು ಆಯುಷ್ - AYUSH (BAMS, BUMS, BHMS, ಇತ್ಯಾದಿ) ಪದವಿಗಳಿಗೆ ಪ್ರವೇಶ ಪಡೆಯಲು ಹಾಗೂ ವಿದೇಶದಲ್ಲಿ ಪ್ರಾಥಮಿಕ ವೈದ್ಯಕೀಯ ಅರ್ಹತೆಯನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರತಿ ವರ್ಷವೂ ಅರ್ಹತಾ ಪರೀಕ್ಷೆಯಾಗಿ NEET ಅನ್ನು ನಡೆಸುತ್ತದೆ.

ವಿದ್ಯಾರ್ಥಿಗಳು ಜಾಗತಿಕವಾಗಿ ಕಠಿಣ ಪ್ರವೇಶ ಪರೀಕ್ಷೆಗಳಲ್ಲಿ ಒಂದು ಎಂದು ವ್ಯಾಪಕವಾಗಿ ಪರಿಗಣಿಸಲಾಗಿರುವ NEETಗಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲು AESL ನ ತರಗತಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದಿದ್ದರು. ವಿಷಯಗಳನ್ನು ಸಮರ್ಪಕವಾಗಿ ಅರ್ಥಮಾಡಿಕೊಂಡು ಶಿಸ್ತಿನ ಅಧ್ಯಯನ ವೇಳಾಪಟ್ಟಿಯನ್ನು ಪಾಲಿಸಿರುವುದು ತಮ್ಮ ಯಶಸ್ಸಿಗೆ ಕಾರಣವೆಂದು ಸಾಧಕ ವಿದ್ಯಾರ್ಥಿಗಳು ಬಣ್ಣಿಸಿದ್ದಾರೆ. "ಈ ಎರಡೂ ವಿಷಯಗಳಲ್ಲಿ ಆಕಾಶ್ ಸಂಸ್ಥೆಯು ಮಾಡಿರುವ ಸಹಾಯಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಆದರೆ, AESL ನೀಡಿರುವ ವಿಷಯ ಮತ್ತು ತರಬೇತಿ ಅಲ್ಲದಿದ್ದರೆ ಈ ಅಲ್ಪಾವಧಿಯಲ್ಲಿ ನಾವು ವಿವಿಧ ವಿಷಯಗಳಲ್ಲಿ ಅನೇಕ ಪರಿಕಲ್ಪನೆಗಳನ್ನು ಗ್ರಹಿಸಲು ಸಾಧ್ಯವಾಗುತ್ತಿರಲಿಲ್ಲ" ಎಂದು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಹಾಗೂ ಸಾಧನೆಯ ಹಿನ್ನೆಲೆ ಆಕಾಶ ಶಿಕ್ಷಣ ಸಂಸ್ಥೆ ವತಿಯಿಂದ ಸನ್ಮಾನವನ್ನು ಸಹ ಮಾಡಲಾಯಿತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು SPRINTFEST 2026 ನಲ್ಲಿ ₹40 ಲಕ್ಷ ಸಂಗ್ರಹಿಸುವ ಗುರಿಸಂಧ್ಯಾ ಜನ ಸಂಸ್ಕೃತಿ ಟ್ರಸ್ಟ್ ನಿಂದ 8ನೇ ವರ್ಷದ ವಾರ್ಷಿಕೋತ್ಸವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಜಿ ಪ್ರಧಾನಿ ಸ್ಮರಣೆಯಲ್ಲಿ ಇಂದಿರಾ ಕ್ರೀಡೋತ್ಸವ-2026ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ