LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಕ್ರಮ ಪಡಿತರ ವಿತರಣೆ - 213 ಎಫ್‌ಐಆರ್‌ ಗಳು ದಾಖಲು

ರಾಜ್ಯದಲ್ಲಿ ಅಕ್ರಮ ಪಡಿತರ -ವಿತರಣೆಗೆ ಸಂಬಂಧಿಸಿದಂತೆ 2024-25ನೇ ಸಾಲಿನಲ್ಲಿ ಈವರೆಗೆ 213 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿ 238 ಆರೋಪಿಗಳನ್ನು ಬಂಧಿಸಲಾಗಿದೆ. ಮಾತ್ರವಲ್ಲದೆ, ಇಂತಹ ಪ್ರಕರಣಗಳ ಕುರಿತಂತೆ ಪರಿಶೀಲಿಸಿ ಮೇಲ್ವಿ ಚಾರಣೆಗಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗ ವಾರು ನೇಮಕ ಮಾಡಲಾಗಿದೆ.

ಸಾರ್ವಜನಿಕ ವಿತರಣಾ ಪದ್ದತಿ ಯಡಿ ಪಡಿತರ ವಿತರಣೆಯಲ್ಲಿ ಅಕ್ರಮ ಕಂಡು ಬಂದಾಗ ದಾಳಿ ನಡೆಸಿ ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಪ್ರಕರಣ ದಾಖಲಿಸಿ ಅಕ್ರಮ ಪಡಿತರ ದಾಸ್ತಾನು ಮುಟ್ಟು ಗೋಲು ಹಾಕಿ, ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಬಳಿಕ ಮುಟ್ಟುಗೋಲು ಹಾಕಲಾದ ದಾಸ್ತಾನನ್ನು ವಿಲೇವಾರಿ ಮಾಡಿ ಪಡಿತರ ಮೊತ್ತವನ್ನು ಸರಕಾರಕ್ಕೆ ಜಮೆ ಮಾಡಲಾಗುತ್ತದೆ. ಅದರಂತೆ ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ ಈವರೆಗೆ ದಾಖಲಾದ 213 ಎಫ್‌ಐಆರ್ ಗಳಲ್ಲಿ 2,68,07,872 ರೂ. ಮೌಲ್ಯದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜ್ಯ ಸರಕಾರದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ 2021ರ ಜನವರಿಯಿಂದ ಮೇ 2023 ರವರೆಗೆ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ. ಇವರಿಂದ 13,51,30,858 ರೂ. ದಂಡ ವಸೂಲು ಮಾಡಲಾಗಿದೆ. ರಾಜ್ಯದಲ್ಲಿ (2024ರ ಡಿ.8ರವರೆಗೆ) ಅಂತ್ಯೋದಯದಡಿ 10,80,648 ಪಡಿತರ ಚೀಟಿಗಳಿದ್ದು, ಆದ್ಯತಾ ವಲಯದಡಿ 4. 1,17,58,582 ಪಡಿತರ ಚೀಟಿಗಳಿವೆ. ಒಟ್ಟು 1,28,39,230 ಪಡಿತರ ಚೀಟಿ ಗಳಲ್ಲಿ ಫಲಾನುಭವಿಗಳ ಸಂಖ್ಯೆ 4,42,56,124 ಎಂದು ಗುರುತಿಸಲಾಗಿದೆ.

ಆಹಾರ, ನಾಗರಿಕ ಸರಬರಾಜು ಇಲಾಖೆಯ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ 2023ರ ಸೆಪ್ಟೆಂಬರ್ 29ರಲ್ಲಿ 2,95,986 ಬಿಪಿಎಲ್ ಕಾರ್ಡ್‌ಗಳ ವಿಲೇವಾರಿಗೆ ಆಹಾರ, ನಾಗರಿಕ ಸರಬರಾಜು ಇಲಾಖೆ ಆದೇಶಿಸಿದೆ. ಇದರಲ್ಲಿ ಅರ್ಹ 2,34,631 ಅರ್ಜಿಗಳ ಪೈಕಿ 1,69,630 ಅರ್ಜಿಗಳನ್ನು ಅನುಮೋದಿಸಲಾ ಗಿದ್ದು, 59,528 ಅರ್ಜಿಗಳನ್ನು ವಿವಿಧ ಕಾರಣಗಳಿಗಾಗಿ ತಿರಸ್ಕರಿಸಲಾಗಿದೆ. ಆಹಾರ ಇಲಾಖೆಯಲ್ಲಿ ಬಳಸಲಾಗುತ್ತಿರುವ ಸರ್ವರ್ ಹಳೆಯದಾಗಿರುವ ಕಾರಣ ಎನ್ ಐಸಿಯಿಂದ ಕೆಎಸ್‌ಡಿಸಿ(ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್)ಗೆ ಆಹಾರ ತಂತ್ರಾಂಶದ ವರ್ಗಾವಣೆ ಕಾರ್ಯ ಅಂತಿಮ ಹಂತದಲ್ಲಿದೆ.

ಎನ್‌ಐಸಿಯಿಂದ ಕೆಎಸ್‌ಡಿಸಿಗೆ ವರ್ಗಾವಣೆ ಕಾರ್ಯ ಪೂರ್ಣಗೊಂಡ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ತಿದ್ದುಪಡಿ ಮಾಡುವ ಪ್ರಕ್ರಿಯೆ ನಿರಂತರವಾಗಲಿದೆ ಎಂದು ಇಲಾಖೆಯು ತಿಳಿಸಿದೆ. ರಾಜ್ಯದಲ್ಲಿ ಅಕ್ರಮ ಪಡಿತರದ ಕುರಿತಂತೆ ಸರಕಾರ ಕೈಗೊಂಡಿರುವ ಕಾರ್ಯಗಳ ಕುರಿತಂತೆ ವಿಧಾನ ಪರಿಷತ್‌ನ ಸದಸ್ಯರು ಕೇಳಿರುವ ಪ್ರಶ್ನೆಗಳಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಇಲಾಖೆಯು ಈ ಮೇಲಿನ ಮಾಹಿತಿ ಒದಗಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!