Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

2,191 ಚಿಕಿತ್ಸೆಗಳಿಗೆ ಯಶಸ್ವಿನಿ ಯೋಜನೆ ಅಸ್ತು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸ 69 ಚಿಕಿತ್ಸೆಗಳನ್ನು ಸೇರಿಸಿ
ಒಟ್ಟು 2,191 ಚಿಕಿತ್ಸೆಗಳನ್ನು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಅಂತಿಮ ಮಾಡಲಾಗಿದೆ. ಅಲ್ಲದೆ ದರ ಪರಿಷ್ಕರಣೆ ಮಾಡಿ ಅಂತಿಮಗೊಳಿಸಲಾಗಿದೆ.

 ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕ ಡಾ.ಶ್ರೀನಿವಾಸ ಎನ್.ಟಿ. ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸ್ಸುಗಳನ್ನು ಸಲ್ಲಿಸಿದೆ. ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್​ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿಲ್ಲ. ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕ ಡಾ.ಶ್ರೀನಿವಾಸ್ ಎನ್.ಟಿ. ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿ ರಚಿಸಿದೆ.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿ-ಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

 ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ. ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಿದ್ದು ಒಟ್ಟು 2191 ಚಿಕಿತ್ಸೆಗಳನ್ನು ಅಂತಿಮಗೊಳಿಸಲಾಗಿದೆ.

2024-25ರಲ್ಲಿ ಯಶಸ್ವಿನಿ ಯೋಜನೆಯಡಿ 68,159 ಫಲಾನುಭವಿಗಳು ರೂ. 117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ 17,000 ರೂ. ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು . 127.50 ಕೋಟಿ ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ರ ವರವಿಗೆ ದರ ಹೆಚ್ಚಳವಾಗುವ ಅಂದಾಜಿದ್ದು ಅದರಂತೆ ಸುಮಾರು 70 ಕೋಟಿ ವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು, ಇದರಿಂದ ರೂ. 62.50 ಕೋಟಿಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವ ಇದೆ ಎನ್ನಲಾಗಿದೆ.

ಈ ಹೆಚ್ಚಳವಾಗುವ ಸುಮಾರು ರೂ. 70 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ. 40 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ 30 ಕೋಟಿ ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿಯಲ್ಲಿ ತಿಳಿಸಲಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ