LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಳ್ಳಾರಿಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರ ನಿಧನ

ಬಳ್ಳಾರಿ : ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ಮತ್ತೊಂದು ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಸರ್ಕಾರಕ್ಕೆ ಜಿಲ್ಲಾಡಳಿತ ಆಡಿಟ್ ರಿಪೋರ್ಟ್ ಸಲ್ಲಿಸಿದ್ದು, ಇದರಲ್ಲಿ ಜಿಲ್ಲೆಯಲ್ಲಿ ಕಳೆದ 8 ತಿಂಗಳ ಅವಧಿಯಲ್ಲಿ 23 ಬಾಣಂತಿಯರು ಮೃತಪಟ್ಟಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಿನಿಂದ ಈವರೆಗೂ 23 ಬಾಣಂತಿಯರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆ, ವಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿಯರು ಸಾವನ್ನಪ್ಪಿರುವ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.

ಹೆರಿಗೆ ಸಂದರ್ಭದಲ್ಲಿ ಬಾಣಂತಿಯರಿಗೆ ಅಪೌಷ್ಟಿಕತೆ, ಅನಿಮಿಯಾ ಇತರೆ ಕಾಯಿಲೆಗಳು ಕಾಡುತ್ತಿವೆ. ಹೀಗಾಗಿ ಸಿಜೇರಿಯನ್ ಆಗುವ ಬಾಣಂತಿಯರೇ ಹೆಚ್ಚು ಸಾವನ್ನಪ್ಪುತ್ತಿದ್ದಾರೆ. ಬಾಣಂತಿಯರ ಸಾವಿಗೆ ಕಡಿವಾಣ ಹಾಕಲು ವಿಶೇಷ ಕ್ರಮ ಕೈಗೊಳ್ಳುತ್ತೇವೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!