ಮುಂಬೈ:
ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ಜನರು, 24 ತಾಸಿನಲ್ಲಿ ಮೃತಪಟ್ಟಿದ್ದಾರೆ.
ಮರಾಠವಾಡದ ಪ್ರಮುಖ ನಗರವಾದ ನಾಂದೇಡ್‌ನ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆಯಿಂದ ಈ ಆಘಾತಕಾರಿ ಘಟನೆ ನಡೆದಿದೆ ಎನ್ನಲಾಗಿದೆ.
ಒಂದು ದಿನದಿಂದ ನಾಲ್ಕು ದಿನದ ಒಳಗಿನ 12 ನವಜಾತ ಶಿಶುಗಳು ಮೃತಪಟ್ಟಿವೆ. ತಲಾ ಆರು ಮಂದಿ ಪುರುಷರು ಹಾಗೂ ಮಹಿಳೆಯರು ಕೂಡ ಸಾವಿಗೀಡಾಗಿದ್ದಾರೆ. ಇವರಲ್ಲಿ ಹಲವರು ಹಾವಿನ ಕಡಿತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದರು ಎಂದು ನಾಂದೇಡ್ ಸರ್ಕಾರಿ ಆಸ್ಪತ್ರೆಯ ಡಾ.ಶ್ಯಾಮರಾವ್ ವಾಕೋಡೆ ತಿಳಿಸಿದ್ದಾರೆ.
500 ರೋಗಿಗಳಿಗೆ ಚಿಕಿತ್ಸೆ ನೀಡುವಷ್ಟು ಸಾಮರ್ಥ್ಯವನ್ನು ಈ ಆಸ್ಪತ್ರೆ ಹೊಂದಿದೆ. ಆದರೆ, ಇಲ್ಲಿ 1,200ಕ್ಕೂ ಅಧಿಕ ರೋಗಿಗಳು ಇದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.