ಬೆಂಗಳೂರು: Dr. Rajkumar ಸಮಾಧಿ ಜಾಗದ ಬಗ್ಗೆ ಹೇಳಿಕೆ ನೀಡಿದ Chetan Kumar Ahimsa ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್‌ಕುಮಾರ್ ಸೇನೆಯಿಂದ ದೂರು ನೀಡಲಾಗಿದೆ. ನಟ ಚೇತನ್ ಅವರು ರಾಜ್‌ಕುಮಾರ್ ಹುಟ್ಟುಹಬ್ಬದಂದು ಸಮಾಧಿಗೆ 2.5 ಎಕರೆ ಜಾಗ ನೀಡಿರುವುದು ಸರಿಯೇ ಎಂದು ಪ್ರಶ್ನಿಸಿದ್ದರು. ಭೂಮಿ ಅತ್ಯಂತ ಅಮೂಲ್ಯ ಸಂಪನ್ಮೂಲವಾಗಿದ್ದು, ಸರ್ಕಾರ ಅದನ್ನು ಸಾರ್ವಜನಿಕ ಹಿತಕ್ಕಾಗಿ ಬಳಕೆ ಮಾಡಬೇಕು, ಮತಗಳ ರಾಜಕೀಯಕ್ಕಾಗಿ ಹಂಚಬಾರದು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದರು. ಈ ಹೇಳಿಕೆಗೆ ಆಕ್ರೋಶಗೊಂಡ ಅಭಿಮಾನಿಗಳು, ನಟನು ರಾಜ್ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.