LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ'- ರಾಹುಲ್ ಗಾಂಧಿ ಆರೋಪ

ನವದೆಹಲಿ : 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, "2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು. ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲೂ ಇದೇ ರೀತಿಯ ದೂರು ಬಂದಿದ್ದವು. ಈಗ ನಾವು ಹರಿಯಾಣವನ್ನ ಕೇಂದ್ರೀಕರಿಸಿದ್ದೇವೆ" ಎಂದು ಹೇಳಿದರು.

"ಹರಿಯಾಣ ಚುನಾವಣೆ ವೇಳೆ ಎಲ್ಲಾ ಸಮೀಕ್ಷೆಗಳಲ್ಲೂ ಕಾಂಗ್ರೆಸ್ 52 ರಿಂದ 62 ಸ್ಥಾನಗಳಷ್ಟು ಮುಂದಿತ್ತು. ಅದರಂತೆ ಹರಿಯಾಣ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಸ್ವೀಪ್ ಮಾಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದ್ರೆ ಫಲಿತಾಂಶ ಸಂಪೂರ್ಣ ವಿಭಿನ್ನವಾಗಿತ್ತು. ಹರಿಯಾಣದಲ್ಲಿ ಫಸ್ಟ್ ಟೈಮ್ ಅಂಚೆ ಮತಗಳು ಮತ್ತು ಸಾಮಾನ್ಯ ಮತಗಳಲ್ಲಿ ವ್ಯತ್ಯಾಸ ಆಗಿರುವುದು ಕಂಡುಬಂದಿತು" ಎಂದು ತಿಳಿಸಿದರು.

ಕಾಂಗ್ರೆಸ್ ಕೇವಲ 22,779 ಮತಗಳಿಂದ ಸೋತಿದೆ. ಆದ್ರೆ ಒಟ್ಟು 1.18 ಲಕ್ಷ ಮತಗಳು ವ್ಯತ್ಯಾಸ ಇದೆ. ಅಷ್ಟೇ ಅಲ್ಲ ಹರಿಯಾಣದಲ್ಲಿ 25 ಲಕ್ಷ ಮತಗಳ ಕಳ್ಳತನ ನಡೆದಿದೆ. ಶೇ.12.5 ರಷ್ಟು ನಕಲಿ ಮತಗಳು, 93,000 ವಿಳಾಸಗಳು ಅಮಾನ್ಯವಾದವುಗಳು ಎಂದು ದಾಖಲೆ ಸಮೇತ ವಿವರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026