LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

ವಾಷಿಂಗ್ಟನ್ : ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಈ ಸಂಬಂಧ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, 'ಆಗಸ್ಟ್ 1ರಿಂದ ಭಾರತದ ಮೇಲೆ ಶೇ 25 ಟ್ಯಾರಿಫ್ ಹಾಗೂ ಹೆಚ್ಚುವರಿ ದಂಡವನ್ನು ಹಾಕಲಾಗುವುದು. ಭಾರತ ಅಧಿಕ ಟ್ಯಾರಿಫ್ ವಿಧಿಸುತ್ತಿರುವುದು, ಹಣಕಾಸೇತರ ವ್ಯಾಪಾರ ನಿರ್ಬಂಧ ಹೊಂದಿರುವುದು, ರಷ್ಯಾ ಇಂಧನ ಖರೀದಿಸುತ್ತಿರುವುದು, ಈ ಮೂರು ಅಂಶಗಳನ್ನು ಆಧಾರವಾಗಿಟ್ಟುಕೊಂಡು ಭಾರತದ ಮೇಲೆ ಆಮದು ಸುಂಕ ಹಾಕಲಾಗುತ್ತಿದೆ' ಎಂದು ತಿಳಿಸಿದ್ದಾರೆ.

'ಭಾರತ ನಮ್ಮ ಸ್ನೇಹಿತ. ಆದರೆ, ತೀರಾ ಹೆಚ್ಚು ಟ್ಯಾರಿಫ್ ಇರುವುದರಿಂದ ಅವರೊಂದಿಗೆ ಕಡಿಮೆ ಬ್ಯುಸಿನೆಸ್ ಮಾಡುತ್ತಿದ್ದೇವೆ. ಯಾವುದೇ ದೇಶವೂ ಹೊಂದಿಲ್ಲದ ಅತ್ಯಂತ ಕಠಿಣ ಮತ್ತು ವಿಚಿತ್ರ ಹಣಕಾಸೇತರ ವ್ಯಾಪಾರ ತಡೆಯನ್ನು ಅವರು ಹೊಂದಿದ್ದಾರೆ' ಎಂದು ಪೋಸ್ಟ್ ಮಾಡಿದ್ದಾರೆ.

'ಎಲ್ಲರೂ ರಷ್ಯಾ ಉಕ್ರೇನ್‌ನಲ್ಲಿ ಮಾಡುತ್ತಿರುವ ಯುದ್ಧವನ್ನು ನಿಲ್ಲಿಸಬೇಕೆಂದು ಹೇಳುತ್ತಿರುವ ಸಮಯದಲ್ಲಿ ಭಾರತ ಯಾವಾಗಲೂ ತಮ್ಮ ಮಿಲಿಟರಿ ಉಪಕರಣಗಳ ಬಹುಪಾಲು ರಷ್ಯಾದಿಂದ ಖರೀದಿಸಿದೆ ಮತ್ತು ಚೀನಾದೊಂದಿಗೆ ರಷ್ಯಾದಿಂದ ಹೆಚ್ಚು ಇಂಧನ ಖರೀದಿ ಮಾಡುತ್ತಿದೆ. ಆದ್ದರಿಂದ ಆಗಸ್ಟ್ 1ರಿಂದ ಭಾರತವು ಶೇ. 25 ಟ್ಯಾರಿಫ್ ಕಟ್ಟಬೇಕು. ಜೊತೆಗೆ ಪೆನಾಲ್ಟಿ ಕೂಡ ತೆರಬೇಕು' ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026