LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

250 ರೂಪಾಯಿ ಸಾಲ ಪಡೆದು ಲಾಟರಿ ಖರೀದಿಸಿದ್ರು: ಕೇರಳದ 11 ಪೌರಕಾರ್ಮಿಕ ಮಹಿಳೆಯರಿಗೆ ಸಿಕ್ತು ಕೋಟಿ ಕೋಟಿ ಬಹುಮಾನ

250 ರೂಪಾಯಿ ಸಾಲ ಪಡೆದು ಲಾಟರಿ ಟಿಕೆಟ್ ಖರೀದಿಸಿದ ಕೇರಳದ 11 ಪೌರಕಾರ್ಮಿಕ ಮಹಿಳೆಯರ ಅದೃಷ್ಟ ಖುಲಾಯಿಸಿದೆ. ಕೇರಳ ಲಾಟರಿ ಇಲಾಖೆ ನಡೆಸುವ ಡ್ರಾನಲ್ಲಿ 10 ಕೋಟಿ ರೂಪಾಯಿ ಬಹುಮಾನ ಲಭಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆಯರು, ನಾವೆಲ್ಲರೂ ಮೊದಲು ಹಣವನ್ನು ಒಟ್ಟುಗೂಡಿಸಿ ಲಾಟರಿ ಟಿಕೆಟ್‍ಗಳನ್ನು ಖರೀದಿಸಿದ್ದೆವು. ಇದೇ ಮೊದಲ ಬಾರಿಗೆ ಗೆದ್ದಿದ್ದೇವೆ. ಬಹುಮಾನ ಗೆಲ್ಲುತ್ತೇವೆ ಎಂದು ಕನಸಲ್ಲೂ ಊಹಿಸಿರಲಿಲ್ಲ. ನಮ್ಮ ಟಿಕೆಟ್‍ಗೆ ಬಹುಮಾನ ಬಂದಿರುವುದು ತಿಳಿದಾಗ ಖುಷಿಯಾಯಿತು. ನಮಗೆ ವೇತನ ಹೊರತುಪಡಿಸಿ ಯಾವುದೇ ಆದಾಯ ಮೂಲಗಳಿಲ್ಲ. ನಾವೆಲ್ಲರೂ ಜೀವನದಲ್ಲಿ ಕಷ್ಟಗಳನ್ನು ಎದುರಿಸುತ್ತಿದ್ದೇವೆ. ನಮ್ಮ ಸಮಸ್ಯೆಗಳನ್ನು ಪರಿಹರಿಸಲು ಈ ಹಣ ಸಹಕಾರವಾಗಲಿದೆ ಎಂದು ಖುಷಿಹಂಚಿಕೊಂಡಿದ್ದಾರೆ.

ನಗರಸಭೆಯ ಹರಿತಾ ಕರ್ಮ ಸೇನೆ ಒಕ್ಕೂಟದ ಅಧ್ಯಕ್ಷೆ ಶೀಜಾ ಮಾತನಾಡಿ, ಈ ಬಾರಿ ಅರ್ಹರಿಗೆ ಅದೃಷ್ಟ ಒಲಿದು ಬಂದಿದೆ. ಎಲ್ಲಾ ವಿಜೇತರು ಶ್ರಮಜೀವಿಗಳಾಗಿದ್ದಾರೆ. ಅವರೆಲ್ಲ ಹೆಚ್ಚಾಗಿ ಸಾಲದಲ್ಲಿದ್ದಾರೆ. ಅಲ್ಲದೇ ಮದುವೆಗೆ ಬಂದಿರುವ ಹೆಣ್ಣು ಮಕ್ಕಳಿದ್ದಾರೆ. ಕೆಲವರು ಅವರ ಕುಟುಂಬಸ್ಥರ ಚಿಕಿತ್ಸಾ ವೆಚ್ಚಕ್ಕೆ ಹಣ ಹೊಂದಿಸಬೇಕಿದೆ. ಆರ್ಥಿಕವಾಗಿ ಅವರು ಭದ್ರವಾಗಿಲ್ಲ. ಅಂಥವರಿಗೆ ಈ ಲಾಟರಿ ಒಲಿದಿರುವುದು ಖುಷಿ ನೀಡಿದೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂ