LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉತ್ತರಾಖಂಡದಲ್ಲಿ ಮೇಘಸ್ಫೋಟ; ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ನಾಪತ್ತೆಯಾದವರ ಕುಟುಂಬಸ್ಥರು ತಿಳಿಸಿದ್ದಾರೆ.

ಭೀಕರ ಪ್ರವಾಹದಲ್ಲಿ ನಾಪತ್ತೆಯಾದ 28 ಜನರ ಪೈಕಿ 20 ಮಂದಿ ಕೇರಳ ಮೂಲದವರಾಗಿದ್ದು, ಮಹಾರಾಷ್ಟ್ರದಲ್ಲಿ ನೆಲೆಸಿದ್ದರು. ಇನ್ನುಳಿದ 8 ಮಂದಿ ಕೇರಳದ ವಿವಿಧ ಜಿಲ್ಲೆಗಳ ನಿವಾಸಿಯಾಗಿದ್ದರು. ನಾಪತ್ತೆಯಾದವರಲ್ಲಿ ದಂಪತಿ ಕೂಡ ಇದ್ದರು. ಮೇಘಸ್ಫೋಟ ಸಂಭವಿಸುವ ಒಂದು ದಿನದ ಹಿಂದೆ ಅವರ ಮಗ ನಮಗೆ ಕೊನೆಯದಾಗಿ ಫೋನ್ ಮಾಡಿದ್ದರು. ಮರುದಿನ ಬೆಳಗ್ಗೆ 8:30ರ ಸುಮಾರಿಗೆ ಅವರು ಉತ್ತರಕಾಶಿಯಿಂದ ಗಂಗೋತ್ರಿಗೆ ಹೋಗುತ್ತಿದ್ದೇವೆ ಎಂದು ಹೇಳಿದ್ದರು. ಆ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಬಳಿಕ ನಮಗೆ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ದಂಪತಿಯ ಸಂಬಂಧಿಯೊಬ್ಬರು ಹೇಳಿದ್ದಾರೆ.

10 ದಿನಗಳ ಉತ್ತರಾಖಂಡ ಪ್ರವಾಸವನ್ನು ಏರ್ಪಡಿಸಿದ ಹರಿದ್ವಾರ ಮೂಲದ ಟ್ರಾವೆಲ್ ಏಜೆನ್ಸಿ ಕೂಡ ಪ್ರವಾಸಿಗರ ಕುರಿತು ಯಾವುದೇ ಅಪ್ಡೇಟ್ ಕೊಟ್ಟಿಲ್ಲ. ಅವರ ಫೋನ್‌ಗಳಲ್ಲಿ ಈಗ ಬ್ಯಾಟರಿ ಖಾಲಿಯಾಗಿರಬಹುದು. ಪ್ರಸ್ತುತ ಆ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲ ಎಂದು ಸಂಬಂಧಿ ತಿಳಿಸಿದ್ದಾರೆ.

ಉತ್ತರಕಾಶಿಯ ಧರಾಲೀಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವನ್ನ ಭಾರತೀಯ ಸೇನೆ, ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಆರಂಭಿಸಿವೆ. ಭಾರೀ ಮಳೆಯ ನಡುವೆಯೂ 150 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 150ಕ್ಕೂ ಹೆಚ್ಚುಮಂದಿಯನ್ನು ಪ್ರವಾಹಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ. ಅಲ್ಲದೇ ಪ್ರವಾಹದಿಂದಾಗಿ ಈವರೆಗೆ ಐವರು ಸಾವನ್ನಪ್ಪಿರುವುದು ದೃಢವಾಗಿದೆ. ಐವರ ಮೃಹದೇಹಗಳನ್ನೂ ಹೊರತೆಗೆಯಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026