LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ದತಿ ಕುರಿತು 3 ದಿನಗಳ ತರಬೇತಿ

 

ಚಿತ್ರದುರ್ಗ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದೇ ಜುಲೈ 17 ರಿಂದ 19 ರವರೆಗೆ ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಆಸಕ್ತ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು 3 ದಿನಗಳ ವಸತಿಯುಕ್ತ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜುಲೈ 17ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಾಗರಾಜ್ ಅವರು ವೈಜ್ಞಾನಿಕ ಹೈನುಗಾರಿಕೆ ಪದ್ದತಿ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.

ಜುಲೈ18ರಂದು ಮೊಳಕಾಲ್ಮುರು ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಿ.ತಿಪ್ಪೇಸ್ವಾಮಿ, ಚಿತ್ರದುರ್ಗ ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಾಗರಾಜ್ ಅವರು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ದತಿ ಕುರಿತು ಮಹಿತಿ ನೀಡಲಿದ್ದಾರೆ. ಜುಲೈ19ರಂದು ಸೂಗೂರು, ಕಾಂತ್ರಿಕೇನಹಳ್ಳಿ ಮತ್ತು ಹಿರಿಯೂರಿನ ವಿವಿಧ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ತಾಕುಗಳಿಗೆ ರೈತರನ್ನು ಕರೆದುಕೊಂಡು ಹೋಗಲಾಗುವುದು.

ಆದ ಪ್ರಯುಕ್ತ ಆಸಕ್ತ 40 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು. ಮೊದಲು ನೋಂದಾವಣಿ ಮಾಡಿಕೊಂಡ 40 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026