LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!


ಬೆಂಗಳೂರು: ಕರ್ನಾಟಕದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣ ಮಾಡುವುದನ್ನು ನಿಯಂತ್ರಿಸಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಹೊಸ ವಿಧೇಯಕ ಮಂಡಿಸಲು ಕಾನೂನು ಇಲಾಖೆ ಮುಂದಾಗಿದೆ. ಹೌದು.. ರಾಜ್ಯದಲ್ಲಿ ದ್ವೇಷ ಭಾಷಣ ಸಾಬೀತಾದರೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ನಗದು ದಂಡ ವಿಧಿಸಲು ಅವಕಾಶ ಮಾಡಿಕೊಡುವಂಥ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ-2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸುತ್ತಿದೆ.





ಇದರಡಿ ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ. ಈಗಾಗಲೇ ಭಾರತೀಯ ನಾಗರಿಕ ದಂಡ ಸಂಹಿತೆಯಲ್ಲಿ ದ್ವೇಷ ಭಾಷಣ ನಿಷಿದ್ಧವಾದರೂ ಇದಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ವಿಸ್ತೃತವಾಗಿ ಕರಡು ಸಿದ್ಧಪಡಿಸಲಾಗಿದೆ ಎಂದು ಕಾನೂನು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.





ಸದ್ಯಕ್ಕೆ ಕರಡು ಸಿದ್ಧಪಡಿಸಿದ್ದು, ಕರಡು ಪ್ರತಿ ಅಂತಿಮಗೊಳಿಸಿದ ಬಳಿಕ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುತ್ತೆ. ಬಳಿಕ ಮುಂದಿನ ಬಜೆಟ್‌ ಅಧಿವೇಶನದಲ್ಲಿ ಈ ಬಗ್ಗೆ ವಿಧೇಯಕ ಮಂಡಿಸಲು ಉದ್ದೇಶಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಸದಸ್ಯರ ಅಭಿಪ್ರಾಯದಂತೆ ಮುಂದುವರೆಯಲು ನಿರ್ಧರಿಸಲಾಗಿದೆ. ಹೀಗಾಗಿ ವಿಧೇಯಕ ಮಂಡನೆಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕಿದೆ.





ಭಾಷೆ, ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ ವಿಚಾರವಾಗಿ ದ್ವೇಷ ಭಾಷಣ ಮಾಡುವಂತಿಲ್ಲ. ಜತೆಗೆ ಯಾವುದೇ ವ್ಯಕ್ತಿಗೆ ಹಾನಿ ಮಾಡುವ, ದ್ವೇಷ ಉತ್ತೇಜಿಸುವ, ಅದನ್ನು ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 5 ಸಾವಿರ ರು.ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಶಿಕ್ಷೆ ವ್ಯಾಪ್ತಿಗೆ ತರಲು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ.





ಯಾವುದೇ ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಧ್ವನಿ ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಂ, ಸಾಫ್ಟ್‌ವೇರ್ ಮತ್ತು ಡೇಟಾಬೇಸ್‌ ಕೂಡ ಕಾನೂನು ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಇದರಡಿ ಯಾವುದೇ ರೀತಿಯಲ್ಲಿ ದ್ವೇಷ ಹರಡಲು ಬಳಕೆಯಾಗುವ ವ್ಯಕ್ತಿ, ಪ್ರಸಾರ ಮಾಡುವ ವಾಹಿನಿಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್‌ ಎಂಜಿನ್‌ಗಳನ್ನು ಕೂಡ ಕಾನೂನು ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು300 ನಕ್ಸಲರು ಶರಣಾಗತಿ: 'ಈ ಹಿಂದೆ ಬಾಂಬ್ ಸ್ಫೋಟಿಸುತ್ತಿದ್ದ ಸ್ಥಳದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ'- ಮೋದಿಸ್ಟಾರ್ ಕಿಡ್ ಐಎಎಸ್‌ ಶ್ರುತಂಜಯ್ ನಾರಾಯಣನ್ ಯಶಸ್ಸಿನ ಕಥನನಮ್ಮ ಮೇಲೆ ಮಾಟ ಮಂತ್ರ ಆಗಿದೆಯೇ, ಇಲ್ಲವೇ ಎಂದು ತಿಳಿಯೋದು ಹೇಗೆ.?ವಾಯುಭಾರ ಕುಸಿತದ ಹಿನ್ನೆಲೆ : ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ.!ವೈದ್ಯಕೀಯ ಕೋರ್ಸ್ ಸೇರಬಯಸುವವರಿಗೆ ಗುಡ್ ನ್ಯೂಸ್.!ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡಿಸಿ ಜಾಗತಿಕ ಲಿಂಗಾಯಿತ ಮಹಾಸಭಾ ಜಿಲ್ಲಾಧಿಕಾರಿಗೆ  ಮನವಿ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.! 18-10-2025...!ವಚನ.: -ಮಾದಾರ ಧೂಳಯ್ಯ.!