LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

ನವದೆಹಲಿ : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ವಶಕ್ಕೆ ಪಡೆದಿದ್ದಾರೆ.

ಸಂಸತ್ತಿನ ಕಟ್ಟಡದ ಹೊರಗೆ ರಾಜಕಾರಣಿಗಳು ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಹಲವರು ರಸ್ತೆಗಳಲ್ಲಿ ಕುಳಿತಿದ್ದರು. ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗುತ್ತಾ ಬ್ಯಾರಿಕೇಡ್ ತಳ್ಳಲು ಕೆಲವರು ಮುಂದಾದರು.

ಸಂಸತ್ ಭವನದ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿತ್ತು. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದುಕೊಂಡರು. ನಾಲ್ಕೈದು ಬಸ್‌ಗಳನ್ನು ನಿಯೋಜಿಸಿ, ಬ್ಯಾರಿಕೇಡ್ ಹಾಕಿ ಪೊಲೀಸರು ಪ್ರತಿಭಟನೆಗೆ ತಡೆಯೊಡ್ಡಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026