LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫಲವನಹಳ್ಳಿ : 32 ಜೀವಂತ ನಾಡ ಬಾಂಬ್ ಪತ್ತೆ

ದಾವಣಗೆರೆ,ಡಿ.26 : ಜಿಲ್ಲೆಯ ಹೊನ್ನಾಳಿ - ನ್ಯಾಮತಿ ತಾಲೂಕಿನ ಹರಮಘಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲು ತಂದಿಟ್ಟಿದ್ದ 32 ಜೀವಂತ ನಾಡ ಬಾಂಬ್ ಪತ್ತೆ ಮಾಡಲಾಗಿದೆ.
ಅರಣ್ಯ ಇಲಾಖೆ ಅಕಾರಿಗಳು ಗಸ್ತು ತಿರುಗುವ ವೇಳೆ 32 ಜೀವಂತ ನಾಡ ಬಾಂಬ್ ವಶಪಡಿಸಿ ಕೊಂಡಿದ್ದು, ನಾಲ್ವರು ಆರೋಪಿಗಳು ಅಕಾರಿಗಳು ಬರುತ್ತಿದ್ದಂತೆ ಎರಡು ಬೈಕ್ ಬಿಟ್ಟು  ಪರಾರಿ ಆಗಿದ್ದಾರೆ.

ಫಲವನಹಳ್ಳಿ ಗ್ರಾಮದ ಮೀಸಲು ಅರಣ್ಯ ಪ್ರದೇಶ ದಲ್ಲಿ ಅರಣ್ಯ ಅಕಾರಿಗಳು ಗಸ್ತು ತಿರುಗುತ್ತಿದ್ದರು. ಈ ವೇಳೆ ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿದ್ದ ನಾಲ್ವರು ಎರಡು ಬೈಕ್ ಗಳಲ್ಲಿ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದರು. ಇದರಿಂದ ಅನುಮಾನಗೊಂಡ ಅಕಾರಿಗಳು ವಿಚಾರಿಸಲು ಮುಂದಾಗುತ್ತಿದ್ದಂತೆ ನಾಲ್ವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ನ್ಯಾಮತಿ ಉಪವಲಯ ಅರಣ್ಯಾಕಾರಿ ಬರ್ಕತ್ ಅಲಿ, ಗಸ್ತು ಅರಣ್ಯ ಪಾಲಕರಾದ ಹೆಚ್. ಬಿ. ಅಂಜಲಿ, ಕ್ಷೇಮಾಭಿವೃದ್ಧಿ ಅರಣ್ಯ ವೀಕ್ಷಕ ಎಂ.ಪಿ. ಬಸವ ರಾಜಪ್ಪ, ನೆಡುತೋಪು ಕಾವಲುಗಾರರಾದ ಸುನೀಲ ಮತ್ತು ಪ್ರವೀಣ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಕೆಂಪು ಮತ್ತು ಹಳದಿ ಮಿಶ್ರಿತ ಕವರ್ ಗಳನ್ನು ಬೈಕ್ ಗಳಲ್ಲಿ ಬಂದಿದ್ದವರು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿದ್ದಾರೆ. ಬೈಕ್ ಬಳಿ ಹೋಗಿ ಪರಿಶೀಲನೆ ನಡೆಸಿದಾಗ ೩೨ ನಾಡಮದ್ದು ಗುಂಡುಗಳು ಪತ್ತೆಯಾಗಿವೆ ಎಂದು ಅರಣ್ಯ ಇಲಾಖೆಯ ಅಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ನಾಲ್ವರು ಆರೋಪಿಗಳ ಗುರುತು ಪತ್ತೆ ಹಚ್ಚಿರುವ ಅರಣ್ಯ ಇಲಾಖೆಯ ಅಕಾರಿಗಳು ತಾಲೂಕಿನ ಮಾದಾಪುರ ಗ್ರಾಮದ ತಿಮ್ಮಪ್ಪ ಮತ್ತು ಗುಡ್ಡಪ್ಪ ಜೊತೆಗೆ ಮತ್ತಿಬ್ಬರು ಆರೋಪಿಗಳು ಪರಾರಿ ಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಬರ್ತಕ್ ಅಲಿ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST