LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರತಿ ಟನ್‌ ಕಬ್ಬಿಗೆ ಸರ್ಕಾರದಿಂದ 3,300 ರೂ. ದರ ನಿಗದಿ

ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ (1 ಸಾವಿರ ಕೆಜಿ) ಕಬ್ಬಿಗೆ (Sugar Cane) 3,300 ರೂ. ನ್ಯಾಯಯುತ ಮತ್ತು ಲಾಭದಾಯಕ ದರವನ್ನು ಸರ್ಕಾರ ನಿಗದಿ ಮಾಡಿದೆ.

ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ನಿರ್ಧಾರಕ್ಕೆ ಕಬ್ಬು ಬೆಳೆಗಾರರು ಒಪ್ಪಿಗೆ ನೀಡಿದ್ದಾರೆ. ಬೆಳಗಾವಿ ಗುರ್ಲಾಪುರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.

ಕೇಂದ್ರ ಸರ್ಕಾರ ಶೇ.10.25 ಇಳುವರಿ ಆಧಾರದ ಮೇಲೆ ಪ್ರತಿ ಟನ್‌ ಕಬ್ಬಿಗೆ 3,550 ರೂ. ಎಫ್‍ಆರ್‌ಪಿ ದರವನ್ನು ನಿಗದಿ ಮಾಡಿತ್ತು. ಆದರೆ ಕರ್ನಾಟಕದಲ್ಲಿ ಸರಾಸರಿ ಇಳುವರಿ ಪ್ರಮಾಣ ಶೇ.9.5 ಮಾತ್ರ ಇದೆ. ಹೀಗಾಗಿ 3,550 ರೂ. ನೀಡಲು ಸಾಧ್ಯವಿಲ್ಲ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ಪಟ್ಟು ಹಿಡಿದಿದ್ದರು. ಇನ್ನೊಂದು ಕಡೆ ರೈತರು ಗುಜರಾತ್‌, ಮಹಾರಾಷ್ಟ್ರದಲ್ಲಿ 3,500 ರೂ. ನೀಡುವಾಗ ನಮಗೆ ಯಾಕೆ ಕಡಿಮೆ ಹಣ ನೀಡಲಾಗುತ್ತಿದೆ ಎಂದು ಪ್ರಶ್ನಿಸಿ ಪ್ರತಿಭಟನೆಗೆ ಇಳಿದಿದ್ದರು.

ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸರ್ಕಾರ ರೈತರು ಮತ್ತು ಕಾರ್ಖಾನೆ ಮಾಲೀಕರ ಜೊತೆ ಸಂಧಾನ ನಡೆಸಿತ್ತು. ರೈತರು ಮತ್ತು ಕಾರ್ಖಾನೆ ಮಾಲೀಕರು ತಮ್ಮ ಹಠದಿಂದ ಹಿಂದಕ್ಕೆ ಸರಿಯಾದ ಕಾರಣ ಜಟಿಲವಾಗಿತ್ತು. ಈಗ ಸರ್ಕಾರ 50 ರೂ. ನೀಡುವುದಾಗಿ ಹೇಳಿದ ನಂತರ ಮಾಲೀಕರು ಪಟ್ಟು ಸಡಿಲಿಸಿ 50 ರೂ. ನೀಡುವುದಾಗಿ ಒಪ್ಪಿಕೊಂಡಿದ್ದಾರೆ.

ಪ್ರತಿ ಟನ್‌ಗೆ ಕಬ್ಬಿಗೆ ರಾಜ್ಯದಲ್ಲಿ 3,300 ರೂ. ಎಫ್‌ಆರ್‌ಪಿ ನಿಗದಿ ಮಾಡಲಾಗಿದೆ. ಹಾಲಿ 3,200 ರೂ.ಗೆ ಹೆಚ್ಚುವರಿಯಾಗಿ 100 ರೂ. ನೀಡಲು ಕಾರ್ಖಾನೆ ಮಾಲೀಕರು ಒಪ್ಪಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಎಫ್ಆರ್‌ಪಿ ನಿಗದಿ ಮಾಡುವಾಗ ಕಟಾವು, ಸಾಗಾಣೆ ಸೇರಿಸಿ 3,550 ರೂ. ದರವನ್ನು ನಿಗದಿ ಮಾಡಿತ್ತು. ಆದರೆ ಕರ್ನಾಟಕದಲ್ಲಿ ಕಟಾವು, ಸಾಗಾಣೆ ಹೊರತುಪಡಿಸಿ 3,300 ರೂ. ದರ ನಿಗದಿ ಮಾಡಲಾಗಿದೆ.

ಕಾರ್ಖಾನೆಗಳು 50 ರೂ. ಹೆಚ್ಚಿಗೆ ನೀಡಲು ಒಪ್ಪಿಗೆ ನೀಡಿದರೆ ಸರ್ಕಾರದಿಂದಲೂ ಪ್ರತಿಟನ್‌ಗೆ 50 ರೂ. ಸಹಾಯಧನ ಸಿಗಲಿದೆ. ಸರ್ಕಾರ ಶೇ.11.25 ಇಳುವರಿ (ಉತ್ತರ ಕರ್ನಾಟಕದಲ್ಲಿ ಉತ್ತಮ ಇಳುವರಿ ಬರುತ್ತಿದೆ) ಆಧಾರದ ಮೇಲೆ ಪ್ರತಿ ಟನ್‌ ಕಬ್ಬಿಗೆ 3,300 ರೂ. ದರವನ್ನು ನಿಗದಿ ಮಾಡಿದೆ. ಶೇ.10.25 ಇಳುವರಿಗೆ 3,200 ರೂ. ದರ ನಿಗದಿಯಾಗಿದೆ.

ಕಾರ್ಖಾನೆಗಳು ಒಂದೇ ಕಂತಿನಲ್ಲಿ 3,200 ರೂ. ನೀಡಬೇಕಾಗುತ್ತದೆ. ಉಳಿದ 50 ರೂ. ಬಾಕಿ ಹಣವನ್ನು 6 ತಿಂಗಳಲ್ಲಿ ಕೊಡಬೇಕು. ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 300 ಕೋಟಿ ರೂ. ಹೊರೆಯಾಗಲಿದೆ. ಇಡೀ ರಾಜ್ಯಕ್ಕೆ ಅನ್ವಯ ಆಗುವಂತೆ ಈ ದರ ಜಾರಿ ಮಾಡುತ್ತಿದ್ದೇವೆ ಎಂದು ಸರ್ಕಾರ ಹೇಳಿದೆ.

ನಿರ್ದಿಷ್ಟ ತೂಕದ ಕಬ್ಬನ್ನು ಅರೆದ ಬಳಿಕ ಉತ್ಪಾದನೆಯಾದ ಸಕ್ಕರೆಯ ಶೇಕಡವಾರು ಪ್ರಮಾಣವನ್ನು ಇಳುವರಿ ಪ್ರಮಾಣ ಎನ್ನಲಾಗುತ್ತದೆ. ಉದಾಹರಣೆಗೆ 100 ಕೆಜಿ ಕಬ್ಬು ಅರೆದಾಗ 10 ಕೆಜಿ ಸಕ್ಕರೆ ಸಿಕ್ಕಿದರೆ ಆಗ ಆ ಕಬ್ಬಿನ ಇಳುವರಿ ಪ್ರಮಾಣ ಶೇ.10 ಆಗುತ್ತದೆ.

ಕೇಂದ್ರ ಸರ್ಕಾರವು 2025-26ನೇ ಸಾಲಿಗೆ ಟನ್‌ ಕಬ್ಬಿಗೆ 3,550 ರೂ ಎಫ್‌ಆರ್‌ಪಿ ದರ ನಿಗದಿ ಮಾಡಿದೆ. ಈ ಎಫ್ಆರ್‌ಪಿ ದರ ಸಿಗಬೇಕಾದರೆ ಇಳುವರಿ ಪ್ರಮಾಣದ ಮಿತಿ ಶೇ.10.25 ಇರಬೇಕು ಎಂದು ತಿಳಿಸಿದೆ. ಅಂದರೆ 1,000 ಕೆಜಿ ಕಬ್ಬು ಅರೆದರೆ 102.5 ಕೆಜಿ ಸಕ್ಕರೆ ಉತ್ಪಾದನೆಯಾಗಬೇಕಾಗುತ್ತದೆ. ಒಂದು ವೇಳೆ ಈ ಮಿತಿಗಿಂತ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಉತ್ಪಾದನೆಯಾದರೆ ಒಂದು ಟನ್‌ ಕಬ್ಬಿಗೆ 3,550 ರೂ. ಎಫ್‌ಆರ್‌ಪಿ ದರ ಸಿಗುವುದಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026