LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 37 ಮಂದಿ ಮೃತ್ಯು; 400 ಕೋಟಿ ರೂ.ಗೂ ಅಧಿಕ ಹಾನಿ

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 37 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಜೊತೆಗೆ ಮಳೆಯಿಂದಾಗಿ 400 ಕೋಟಿ ರೂ.ಗೂ ಅಧಿಕ ಹಾನಿಯುಂಟಾಗಿದೆ.

ನಿರಂತರ ಮಳೆಯಿಂದಾಗಿ ಮಂಡಿ ಜಿಲ್ಲೆಯೊಂದರಲ್ಲಿಯೇ ಹನ್ನೊಂದು ಮಂದಿ ಮೃತಪಟ್ಟಿದ್ದು, ೩೪ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ ಕೆಲವೆಡೆ ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳು ಅಸ್ತವ್ಯಸ್ತಗೊಂಡಿವೆ. ರಾಜ್ಯಾದ್ಯಂತ ಸುಮಾರು 250 ರಸ್ತೆಗಳ ಸಂಪರ್ಕ ಬಂದ್ ಆಗಿದೆ. 500ಕ್ಕೂ ಹೆಚ್ಚು ವಿದ್ಯುತ್ ವಿತರಣಾ ಟ್ರಾನ್ಸ್ಫಾರ್ಮರ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಸುಮಾರು 700 ಕುಡಿಯುವ ನೀರಿನ ಘಟಕಗಳ ಮೇಲೆ ಪರಿಣಾಮವನ್ನುಂಟು ಮಾಡಿದೆ.

ರಾಜಧಾನಿ ಶಿಮ್ಲಾದಲ್ಲಿ ಶಾಲೆಗಳು ನೀರಿನಿಂದ ಜಲಾವೃತಗೊಂಡಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೊಂಡೆದೆ ಚತುಷ್ಪಥ ರಸ್ತೆಯ ಒಂದು ಭಾಗದ ಕುಸಿದಿದೆ. ಮಳೆಯಿಂದಾಗಿ ಮನೆಗಳು ಕುಸಿಯುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಹಾನಿಯುಂಟಾದ ಕೆಲವು ಕಡೆಗಳಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026