LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ಸಚಿವ ಸಂಪುಟ ಗ್ರೀನ್ ಸಿಗ್ನಲ್

ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ರೂ.2 ಕೋಟಿ ವೆಚ್ಚದ ಕಾಮಗಾರಿಗಳು, ರೂ.1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ವಿಧಾನಸೌಧದ ಕ್ಯಾಬಿನೆಟ್ ಹಾಲ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ ಸದನಕ್ಕೆ ವಿಧೇಯಕ ತರಲು ಅನುಮೋದನೆ ನೀಡಲಾಗಿದೆ.

ಒಂದು ಕೋಟಿವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವುದು. ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ಕೊಡಲು ನಿರ್ಧಾರ ಮಾಡಲಾಗಿದೆ.

ಎಸ್​ಸಿ ಎಸ್​ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿವರೆಗಿನ ಮೊತ್ತ ವಿಸ್ತರಿಸಿ 2 ಕೋಟಿವರೆಗೆ ಮೀಸಲಾತಿ ಅವಕಾಶ ಕಲ್ಪಿಸಲಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.



ಇದೇ ವೇಳೆ ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗ್ರಾಮೀಣ ಭಾಗದಲ್ಲಿ ಇ ಖಾತಾ ನೀಡಲು ಸಚಿವ ಸಂಪುಟದ ಒಪ್ಪಿಗೆ ನೀಡಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ಅನುಮೋದನೆ ಕೊಡಲಾಗಿದೆ.

ಈ ವಿಧೇಯಕ ಅಂಗೀಕಾರವಾದರೆ, ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮ ಠಾಣಾ ವ್ಯಾಪ್ತಿಯಲ್ಲಿನ ಮನೆ ನಿವೇಶನಗಳು ಸಕ್ರಮ ಮಾಡಲಾಗುತ್ತದೆ. ಕೆಪಿಎಸ್​ಸಿಯಲ್ಲಿ ಲೋಪ ದೋಷಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಸುಧಾರಣಾ ಕ್ರಮಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಇದಲ್ಲದೆ, ಲೋಕಸೇವಾ ಆಯೋಗದ ಪರೀಕ್ಷೆ ಆಡಳಿತ ಸುಧಾರಣೆಗೆ ಪ್ರತ್ಯೇಕ ಸಮಿತಿ ರಚನೆಗೆ ಸಂಪುಟ ಒಪ್ಪಿಗೆ ನೀಡಿದೆ. ಸಮಿತಿ ಶಿಫಾರಸುಗಳನ್ನು ಪಾಲನೆ ಮಾಡುವ ಬಗ್ಗೆಯೂ ಸಂಪುಟ ಸಭೆಯಲ್ಲಿ ಸಮಾಲೋಚನೆ ಮಾಡಲಾಗಿದೆ.

ಲೋಕಸೇವಾ ಆಯೋಗದ ಸಮಗ್ರ ಸುಧಾರಣೆಗೆ ಕ್ರಮ ವಹಿಸಲು ಸಂಪುಟ ತೀರ್ಮಾನ ಕೈಗೊಳ್ಳಲಾಗಿದೆ. ಆಯೋಗದ ಕಾರ್ಯವೈಖರಿ ಮತ್ತು ಅಕ್ರಮಗಳ ಕುರಿತು ವಿಧಾನಸಭೆಯಲ್ಲಿ ಇತ್ತೀಚೆಗೆ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಆಯೋಗದ ಸದಸ್ಯರ ಸಂಖ್ಯೆಯನ್ನು 8ಕ್ಕೆ (ಅಧ್ಯಕ್ಷರು ಸೇರಿ) ಇಳಿಸಲು ಸಚಿವ ಸಂಪುಟ ಸಭೆಯಲ್ಲಿ ಒಲವು ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.



ಪ್ರಸ್ತುತ ಈಗ ಸದಸ್ಯರ ಸಂಖ್ಯೆ 15 ಇದೆ. ಆಯೋಗಕ್ಕೆ ಅರ್ಹರನ್ನು ಆಯ್ಕೆ ಮಾಡಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಶೋಧ ಸಮಿತಿಯೊಂದನ್ನು ರಚಿಸಲು ಸಭೆಯಲ್ಲಿ ಚರ್ಚೆಯಾಗಿದ್ದು, ಮುಂದಿನ ಅಧಿವೇಶನದ ಹೊತ್ತಿಗೆ ಸಮಗ್ರ ಸುಧಾರಣಾ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನ ವಚನ : ವಚನ ಭಂಡಾರಿ ಶಾಂತರಸ !ಅಳಿವಿನಂಚಿನಲ್ಲಿರುವ 15 ಭಾರತೀಯ ರಣಹದ್ದುಗಳ ಬಿಡುಗಡೆರಾಜ್ಯಾದ್ಯಂತ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸಲು ಮುಂದಾದ ಸರ್ಕಾರರೈಲ್ವೆ ಇಲಾಖೆ ಮಹತ್ವದ ನಿರ್ಧಾರ - ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಆಧಾರ್ ಲಿಂಕ್ ಕಡ್ಡಾಯಸಿಂಹ ರಾಶಿ ವರ್ಷ ಭವಿಷ್ಯ 2026: ಈ ವರ್ಷ ಸಿಂಹ ರಾಶಿಗೆ ಅದೃಷ್ಟದ ಮಳೆ!ಕಾರು ಪಲ್ಟಿ: ಕಾರು ಸಹಿತ ಇಬ್ಬರ ದಹನ22 ವರ್ಷಕ್ಕೆ ಯುಪಿಎಸ್‌ಸಿ ಪಾಸ್‌, ಮೋನಿಕಾ ಯಾದವ್ ಅವರ ಸ್ಫೂರ್ತಿದಾಯಕ ಕಥೆರೈತರಿಗೆ ಗುಡ್ ನ್ಯೂಸ್ .! ನಿಮ್ಮ ಜಮೀನಿನ ಇ-ಖಾತಾವನ್ನು ಮನೆಯಲ್ಲಿ ಪಡೆಯಿರಿ.! ಹೇಗೆ ಅಂತೀರ.?ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ಬಗ್ಗೆ ಮಾಹಿತಿ.!ಅಕ್ಕ ಕೆಫೆ ನಿರ್ವಹಿಸಲು ಅರ್ಜಿ ಆಹ್ವಾನ..!