Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮುಸ್ಲಿಂಮರಿಗೆ ಕಾಮಗಾರಿಯಲ್ಲಿ ಶೇ.4 ಮೀಸಲಾತಿ-ಬಿವೈವಿ ಕಿಡಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ಅಲ್ಪಸಂಖ್ಯಾತರು ಎಂದರೆ ಮುಸ್ಲಿಂಮರು ಮಾತ್ರ ಕಾಣುತ್ತಾರೆ ಹೊರತೂ ಇತರ ನೈಜ ಅಲ್ಪಸಂಖ್ಯಾತ ಸಮುದಾಯಗಳಾವುವು ಕಾಣುವುದೇ ಇಲ್ಲ
, ದಶಕಗಳ ಹಿಂದೆ ಅಲ್ಪಸಂಖ್ಯಾತರಾಗಿದ್ದ ಮುಸ್ಲಿಂಮರು ಇಂದು ಸಂಘಟಿತವಾಗಿ ಮುಂಚೂಣಿಯಲ್ಲಿದ್ದಾರೆ, ಕಾಂಗ್ರೆಸ್ ಪಕ್ಷಕ್ಕೆ ಬಹುಸಂಖ್ಯಾತ ಮತ ಬ್ಯಾಂಕ್ ಆಗಿದ್ದಾರೆ,

ಈ ಕಾರಣಕ್ಕಾಗಿ ಮುಸ್ಲಿಂಮರಿಗೆ ಮಾತ್ರ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಉದ್ಯೋಗ ಹಾಗೂ ಶೈಕ್ಷಣಿಕ ಮೀಸಲಾತಿ ನೀಡಲಾಗಿದೆ, ಇದೀಗ ಸರ್ಕಾರಿ ಕಾಮಗಾರಿಗಳಲ್ಲೂ 4% ಮೀಸಲಾತಿ ಕಲ್ಪಿಸಲು ಮುಂದಾಗಿ ನಿಯಮ ರೂಪಿಸಲು ಹೊರಟಿರುವುದು ಮುಸ್ಲಿಂ ಓಲೈಕೆಯ ಪರಮಾವಧಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ಮುಸ್ಲಿಂಮರೂ ಸೇರಿದಂತೆ ಸಮಗ್ರ ಅಲ್ಪಸಂಖ್ಯಾತ ಸಮುದಾಯಗಳ ಕುರಿತು ಯಾವುದೇ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಂಡರೆ ನಾವು ಅದನ್ನು ಆಕ್ಷೇಪಿಸುವುದಿಲ್ಲ. ಆದರೆ ಕೇವಲ ಮುಸ್ಲಿಂಮರನ್ನು ಮಾತ್ರ ಪ್ರತ್ಯೇಕಿಸಿ ಓಲೈಸುವುದು ಸಮಾಜ ಕಟ್ಟುವುದಕ್ಕೋ ಅಥವಾ ಸಮಾಜ ಒಡೆಯುವುದಕ್ಕೋ ಎಂಬ ಪ್ರಶ್ನೆ ಜನರು ಕೇಳುತ್ತಾರೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

"ಬಾಯಲ್ಲಿ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದ ಮಂತ್ರ, ಸಂಪನ್ಮೂಲದ ಪಾಲಿನಲ್ಲಿ ನಿರಂತರ ಪಕ್ಷಪಾತ". ಇದು ಕಾಂಗ್ರೆಸ್ ಅನುಸರಿಸಿಕೊಂಡು ಬಂದಿರುವ ಇಬ್ಬಂದಿ ನೀತಿ, ಸರ್ಕಾರದ ಯೋಜನೆಗಳು ಕಾರ್ಯಗತಗೊಳ್ಳಲು ಪಾರದರ್ಶಕ ನಿಯಮದ ಅಡಿಯಲ್ಲಿ ಕಾಮಗಾರಿಗಳ ನಿರ್ವಹಣೆಯಾಗಬೇಕು, ಈ ನಿಟ್ಟಿನಲ್ಲಿ ಶೋಷಿತ ಸಮುದಾಯಗಳಿಗೆ ಅವಕಾಶ ಕಲ್ಪಿಸಲು ಮೀಸಲಾತಿ ನೀಡುವುದು ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಮೂಲ ಆಶಯಕ್ಕೆ ಪೂರಕವಾಗಿದೆ, ಆದರೆ ಧರ್ಮಾಧಾರಿತ ಮೀಸಲಾತಿ ಕಲ್ಪಿಸುವುದು ಪಾರದರ್ಶಕ ನಿಯಮದ ಅರ್ಥವನ್ನೇ ಕಳೆದುಕೊಳ್ಳುತ್ತದೆ ಎಂದು ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಸುಬು ಆಧಾರಿತ ಅತಿ ಹಿಂದುಳಿದ ಕಾಯಕ ಸಮುದಾಯಗಳು ಆಧುನಿಕ ತಂತ್ರಜ್ಞಾನದ ಹೊಡೆತಕ್ಕೆ ಸಿಲುಕಿ ಬದುಕಿನ ಅಸ್ತಿತ್ವ ಕಂಡುಕೊಳ್ಳಲು ಪ್ರಯಾಸಪಡುತ್ತಿದ್ದಾರೆ, ಇಂತಹ ಅತಿ ಹಿಂದುಳಿದ ಸಮುದಾಯಗಳಿಗೆ ಯಾವ ಕಾರ್ಯಕ್ರಮ, ಯೋಜನೆಗಳನ್ನು ಹಾಗೂ ವಿಶೇಷ ಮೀಸಲಾತಿಯನ್ನು ಕಲ್ಪಿಸಿಕೊಡದ  ಕಾಂಗ್ರೆಸ್ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಿಂದುಳಿದವರ ಬಗ್ಗೆ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ.

ಧರ್ಮದ ಹೆಸರಿನಲ್ಲಿ ಸಮಾಜ ಹಾಗೂ ನಾಡನ್ನು ವಿಭಜನೆ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಕರ್ನಾಟಕ ಬಿಜೆಪಿ  ಬಲವಾಗಿ ಖಂಡಿಸಿ ವಿರೋಧಿಸುತ್ತದೆ. ಸರ್ಕಾರ ಸದ್ಯ ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ಹೊರಟಿರುವ ತುಷ್ಟೀಕರಣದ ಧೋರಣೆಯ ನಿರ್ಧಾರವನ್ನು ಕೈಬಿಡಲು ಒತ್ತಾಯಿಸಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ