LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರ: ಜಿಲ್ಲೆಯಲ್ಲಿ 41,358 ಮತದಾರರು

 

ಚಿತ್ರದುರ್ಗ: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಅಂತಿಮ ಪಟ್ಟಿಯನ್ನು ಮಂಗಳವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಪ್ರಕಟಿಸಿದರು.

ಅಪರ ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿಯಲ್ಲಿ ಮಂಗಳವಾರ ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಅಂತಿಮ ಪಟ್ಟಿ ಪ್ರಕಟ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಮತದಾರರ ನೊಂದಣಿ ನಿಯಮಗಳು, 1960ರ ನಿಯಮಗಳಿಗೆ ಅನುಸಾರವಾಗಿ ಸಿದ್ದಪಡಿಸಿರುವ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕು ತಹಶೀಲ್ದಾರ್ರವರ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಕಚೇರಿ ವೇಳೆಯಲ್ಲಿ ಪರಿಶೀಲನೆಗಾಗಿ ದೊರೆಯುತ್ತದೆ.  ವಿವರಗಳು  https://chitradurga.nic.in/en ರಲ್ಲಿಯೂ ಲಭ್ಯವಿರುತ್ತದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ಆಗ್ನೇಯ ಕ್ಷೇತ್ರದ ಮತದಾರರ ಕರಡು ಪಟ್ಟಿಯಲ್ಲಿ 37,198 ಮತದಾರರು ಇದ್ದರು. ಪ್ರಕಟಿತ ಮತದಾರರ ಅಂತಿಮ ಪಟ್ಟಿ ಅನ್ವಯ 24,031 ಪುರುಷರು, 17,327 ಮಹಿಳಾ ಮತದಾರರು ಸೇರಿದಂತೆ ಒಟ್ಟು 41,358 ಮತದಾರರು ಇದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಮೊಳಕಾಲ್ಮುರು ತಾಲ್ಲೂಕಿನಲ್ಲಿ 2,226 ಪುರುಷರು, 1,080 ಮಹಿಳಾ ಮತದಾರರು ಸೇರಿ ಒಟ್ಟು 3,306 ಮತದಾರರಿದ್ದಾರೆ. ಚಳ್ಳಕೆರೆ ತಾಲ್ಲೂಕಿನಲ್ಲಿ 4,688 ಪುರುಷ, 3,126 ಮಹಿಳೆ ಸೇರಿ ಒಟ್ಟು 7,814. ಚಿತ್ರದುರ್ಗ ತಾಲ್ಲೂಕಿನಲ್ಲಿ 7,144 ಪುರುಷ, 6273 ಮಹಿಳೆ ಸೇರಿ ಒಟ್ಟು 13,417 ಮತದಾರರು. ಹಿರಿಯೂರು ತಾಲ್ಲೂಕಿನಲ್ಲಿ 4,185 ಪುರುಷ, 3,075 ಮಹಿಳೆ ಸೇರಿ ಒಟ್ಟು 7260 ಮತದಾರರು. ಹೊಸದುರ್ಗ ತಾಲ್ಲೂಕಿನಲ್ಲಿ 3,196 ಪುರುಷ, 2,022 ಮಹಿಳೆ ಸೇರಿ ಒಟ್ಟು 5,218 ಮತದಾರರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 2,592 ಪುರುಷ, 1,751 ಮಹಿಳಾ ಮತದಾರರು ಸೇರಿ ಒಟ್ಟು 4,343 ಮತದಾರರಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಕೆ ಕುರಿತಂತೆ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕರಿಸಬೇಕು ಎಂದು ಕೋರಿದರು.

ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮಾ, ಚುನಾವಣಾ ಶಿರಸ್ತೆದಾರ್ ಮಲ್ಲಿಕಾರ್ಜುನ್ ನಾಯಕ, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿಎನ್.ಮೈಲಾರಪ್ಪ, ಪದವೀಧರರ ವಿಭಾಗದ ಜಿಲ್ಲಾಧ್ಯಕ್ಷ ಪ್ರಕಾಶ್ ರಾಮಾನಾಯ್ಕ್, ಕಾರ್ಯದರ್ಶಿ ನಾಸಿರುದ್ದೀನ್, ಬಿಜೆಪಿ ಪಕ್ಷದ ವತಿಯಿಂದ ಕಿರಣ್ ಕುಮಾರ್ ಇದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026