Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಓಜೋನ್ ಅರ್ಬಾನಾ ಕಂಪನಿಯ 423 ಕೋಟಿ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾರಿ ನಿರ್ದೇಶನಾಲಯ(ಇ.ಡಿ)ವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002ರ ಅಡಿಯಲ್ಲಿ ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ಪ್ರವರ್ತಕರುಗಳಿಗೆ ಸಂಬಂಧಿಸಿದ 423.38 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಇ.ಡಿ ತನ್ನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈ. ಲಿಮಿಟೆಡ್ ಹಾಗೂ ಅದರ ಮುಖ್ಯ ಪ್ರವರ್ತಕ ಎಸ್. ವಾಸುದೇವನ್ ಅವರು ಫ್ಲಾಟ್/ಮನೆಗಳನ್ನು ನೀಡುವುದಾಗಿ ಗ್ರಾಹಕರಿಂದ 927.22 ಕೋಟಿ ರೂ.ಗಳಷ್ಟು ಹಣ ಪಡೆದಿದ್ದರು. ಆದರೆ ನಿಗದಿತ ಸಮಯದಲ್ಲಿ ಯಾವುದೇ ಫ್ಲಾಟ್/ಮನೆಗಳನ್ನು ನಿರ್ಮಿಸಿ ಹೂಡಿಕೆದಾರರಿಗೆ ಹಸ್ತಾಂತರಿಸಿರಲಿಲ್ಲ.

ಬದಲಿಯಾಗಿ ಗ್ರಾಹಕರಿಂದ ಹೂಡಿಕೆಯಾಗಿದ್ದ ಮನೆಗಳನ್ನು ವೈಯಕ್ತಿಕ ಆಸ್ತಿ ಖರೀದಿಗೆ, ತಮ್ಮ ಕುಟುಂಬ ಸದಸ್ಯರು ಸೇರಿದಂತೆ ಇತರೆ ಕೆಲ ವ್ಯಕ್ತಿಗಳಿಗೆ ವರ್ಗಾವಣೆಗೆ ಬಳಸಿದ್ದರು. ಆ ಮೂಲಕ ಯೋಜನೆಗಳ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ವಾಸ್ತವವಾಗಿ ಉದ್ದೇಶಿಸಲಾದ ಮನೆಗಳನ್ನು ವೈಯಕ್ತಿಕ ಉದ್ದೇಶಗಳಿಗೆ ಬಳಸಿದ್ದರು ಎಂದು ತನಿಖೆಯ ಮೂಲಕ ಬಹಿರಂಗವಾಗಿದೆ ಎಂದು ಇ.ಡಿ ಮಾಹಿತಿ ನೀಡಿದೆ.


ಇಡಿ ಗ್ರಾಹಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈ. ಲಿಮಿಟೆಡ್‌ನ ಸ್ಥಿರ ಆಸ್ತಿಗಳು (ಮಾರಾಟವಾಗದ ಸ್ಟಾಕ್ 92 ಫ್ಲಾಟ್‌ಗಳು) ಮತ್ತು ಅಕ್ವಾ 2 ಯೋಜನೆಗಳ ಆಸ್ತಿ (13 ಫ್ಲಾಟ್‌ಗಳು, 4.5 ಎಕರೆ ವಾಣಿಜ್ಯ ಭೂಮಿ) ಮತ್ತು ಎಸ್. ವಾಸುದೇವನ್ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಮೂಡಿಗೆರೆಯ ಕನ್ನೆಹಳ್ಳಿ ಗ್ರಾಮದಲ್ಲಿರುವ 179 ಎಕರೆ ಭೂಮಿ ಸೇರಿದಂತೆ ಒಟ್ಟು 423.38 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ ವಿವರಿಸಿದೆ.

ಏನಿದು ಪ್ರಕರಣ:
ಮನೆ ನಿವೇಶನ ಕೊಳ್ಳುವ ಗ್ರಾಹಕರಿಗೆ ಫ್ಲಾಟ್/ಮನೆಗಳನ್ನು ನಿರ್ಮಿಸಿ
, ಅವುಗಳನ್ನು ಹಸ್ತಾಂತರಿಸುವವರೆಗೂ ನಿರ್ಮಾಣ ಪೂರ್ವದಲ್ಲಿ ಸಾಲದ ಕಂತುಗಳನ್ನು ಪಾವತಿಸುವುದಾಗಿ ಆಫರ್ ನೀಡಿದ್ದ ಓಜೋನ್ ಅರ್ಬನಾ ಇನ್ಫ್ರಾ ಕಂಪನಿ ಗ್ರಾಹಕರಿಂದ ಮುಂಗಡವಾಗಿ ಕೋಟ್ಯಂತರ ರೂ. ಹಣ ಹೂಡಿಕೆ‌ಮಾಡಿಸಿತ್ತು.


ಆದರೆ ನಿರ್ಮಾಣ ಕಾರ್ಯವನ್ನು ಸಕಾಲದಲ್ಲಿ ಪೂರ್ಣಗೊಳಿಸುವಲ್ಲಿ ಹಾಗೂ ಗ್ರಾಹಕರಿಗೆ ಫ್ಲಾಟ್ ಹಸ್ತಾಂತರಿಸುವಲ್ಲಿ ವಿಫಲವಾಗಿರುವ ಬಗ್ಗೆ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಓಜೋನ್ ಅರ್ಬಾನಾ ಇನ್ಫ್ರಾ ಡೆವಲಪರ್ಸ್ ಪ್ರೈ. ಲಿಮಿಟೆಡ್ ಮತ್ತು ಅದರ ಪ್ರವರ್ತಕರ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿದ್ದವು.

ಬಳಿಕ ಸುಪ್ರೀಂ ಕೋರ್ಟ್‌ನ ನಿರ್ದೇಶನದ ಮೇರೆಗೆ ಸಿಬಿಐನಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಳಿಕ ಇ.ಡಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಕಳೆದ ಆಗಸ್ಟ್ 1ರಂದು ಓಜೋನ್ ಇನ್ಫ್ರಾ ಪ್ರೈ ಲಿಮಿಟೆಡ್ ಹಾಗೂ ಅದರ ಪ್ರವರ್ತಕರುಗಳಿಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ