Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಹತ್ವದ ಸೂಚನೆ : SSLC ಹಿಂದಿಗೆ ಗ್ರೇಡ್​​ ಬದಲಿಗೆ ಅಂಕ: ಹೈಕೋರ್ಟ್ ಆದೇಶ ಮರುಪರಿಶೀಲನಾ ಅರ್ಜಿ ಇತ್ಯರ್ಥ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲಿಗೆ ಅಂಕ ನೀಡುವಂತೆ ಆದೇಶ ಸಂಬಂಧ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್​​ ಇತ್ಯರ್ಥಪಡಿಸಿದೆ. 2025-26ರಿಂದ ಹಿಂದಿ ವಿಷಯಕ್ಕೆ ಅಂಕ ನೀಡಬೇಕೆಂದು ಪೀಠ ಸ್ಪಷ್ಟಪಡಿಸಿದ್ದು, ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸುವ ಮುನ್ನ ಪರೀಕ್ಷಾ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ.

SSLC ಹಿಂದಿ ವಿಷಯಕ್ಕೆ ಅಂಕ ನೀಡುವಂತೆ ಸೂಚನೆ ಹಿನ್ನೆಲೆ ಹೈಕೋರ್ಟ್ ಆದೇಶ ಮರುಪರಿಶೀಲನೆ ಕೋರಿದ್ದ ಸರ್ಕಾರದ ಅರ್ಜಿ ಇತ್ಯರ್ಥಗೊಂಡಿದೆ. ಪ್ರಸಕ್ತ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲು ಅಂಕ ನೀಡುವಂತೆ ನ್ಯಾ.ಇ.ಎಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಮಾಡಿದೆ. ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಜಾಗೊಂಡಿದೆ. ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಅನುತ್ತೀರ್ಣಗೊಂಡಿದ್ದರು. ಹೀಗಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಕಡಿಮೆ ಮಾಡಲು ಸೂಕ್ತ ತಿದ್ದುಪಡಿಯೊಂದಿಗೆ ನಿಯಮ ರಚಿಸಲು ಸರ್ಕಾರ ಕರಡು ರೂಪಿಸುತ್ತಿದೆ. ಅಂಕದ ಬದಲು ಗ್ರೇಡ್ ನೀಡಲಾಗುತ್ತಿದೆ ಎಂದು ವಾದಿಸಿದ್ದರು.
ಆದರೆ ನ್ಯಾ.ಇ.ಎಸ್.ಇಂದಿರೇಶ್ ಅವರಿದ್ದ ಹೈಕೋರ್ಟ್ ಪೀಠ ಸರ್ಕಾರವನ್ನೇ ಈ ಬಗ್ಗೆ ಪ್ರಶ್ನಿಸಿದೆ. SSLC ಪರೀಕ್ಷೆ ಅಧಿಸೂಚನೆ ಹೊರಡಿಸಿದಾಗಲೇ ಇದನ್ನು ಸ್ಪಷ್ಟಪಡಿಸಬೇಕಿತ್ತು. ಅಧಿಸೂಚನೆಯಲ್ಲಿಲ್ಲದ ಗ್ರೇಡ್ ಪದ್ಧತಿಯನ್ನ ಈಗ ಅನುಷ್ಠಾನಗೊಳಿಸುತ್ತಿದ್ದೀರಿ? ಪಿಯುಸಿಯಲ್ಲಿ ಈಗ ಶೇ.83ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ನೀವು ಎಲ್ಲರನ್ನೂ ಪಾಸ್ ಮಾಡಬೇಕೆಂದಿದ್ದರೆ ಪರೀಕ್ಷೆಯನ್ನೇ ರದ್ದು ಮಾಡಿ. ನಿಯಮ ರೂಪಿಸಿದ ಬಳಿಕ ಸರ್ಕಾರ ಸೂಕ್ತವೆನಿಸಿದ ಕ್ರಮ ಕೈಗೊಳ್ಳಬಹುದು. ಆದರೆ ನಿಯಮ ರೂಪಿಸುವ ಮುಂಚಿನ ಪರೀಕ್ಷೆಯ ಅಂಕ ಪದ್ಧತಿ ಬದಲಾವಣೆ ಸೂಕ್ತವಲ್ಲ ಎಂದು ತಿಳಿಸಿದೆ. ಜೊತೆಗೆ 2025-26ನೇ ಸಾಲಿನ ಎಸ್​​ಎಸ್​​ಎಲ್​​ಸಿ ಹಿಂದಿ ಭಾಷೆಗೆ ಅಂಕ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.

ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿ ಮೂವರು ವಿದ್ಯಾರ್ಥಿನಿಯರು ರಿಟ್ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಿಂದಿ ಅಂಕ ಪರಿಗಣಿಸುತ್ತಾರೆ. ಗ್ರೇಡಿಂಗ್ ನೀಡುವುದರಿಂದ ಭವಿಷ್ಯದಲ್ಲಿ ತೊಂದರೆಯಾಗುತ್ತದೆ. ಹೀಗಾಗಿ ಗ್ರೇಡಿಂಗ್ ಬದಲು ಅಂಕ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿದ್ದರು. ಇನ್ನು ಕೋರ್ಟ್​​ನ ಈ ಆದೇಶ ಎಸ್​ಎಸ್​ಎಲ್​​ಸಿ ಪರೀಕ್ಷೆಯ ಎಲ್ಲ ತೃತೀಯ ಭಾಷೆಗೂ ಅನ್ವಯ ಆಗಲಿದೆ.


ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ತೃತೀಯ ಭಾಷೆ ವಿಷಯಕ್ಕೆ ಸಂಬಂಧಿಸಿದಂತೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರಲು ಶಿಕ್ಷಣ ಇಲಾಖೆ ಆಸಕ್ತಿ ತೋರಿತ್ತು. ಇತ್ತೀಚೆಗೆ ಆ ಬಗ್ಗೆ ಅಧಿಕೃತ ಆದೇಶ ಘೋಷಣೆ ಮಾಡಿತ್ತು. ಪ್ರಥಮ ಮತ್ತು ದ್ವಿತೀಯ ಭಾಷೆಗಳಿಗೆ ನೀಡುವ ಪ್ರಾಮುಖ್ಯತೆಯನ್ನು ತೃತೀಯ ಭಾಷೆಗೆ ನೀಡದೆ, ಅದನ್ನು ಕೇವಲ ಅರ್ಹತಾ ವಿಷಯವನ್ನಾಗಿ ಪರಿವರ್ತಿಸಲು ಸರ್ಕಾರ ಮುಂದಾಗಿತ್ತು. ಇದು ಹಿಂದಿ ಭಾಷಾ ಶಿಕ್ಷಕರ ಸಂಘ ಮತ್ತು ಪೋಷಕರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿವಾದವು ಕೇವಲ ಅಂಕಗಳಿಗೆ ಸೀಮಿತವಾಗದೆ, ಭಾಷಾ ನೀತಿಯ ಸಂಘರ್ಷವಾಗಿಯೂ ಬದಲಾಗಿತ್ತು. ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ