Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಎರಡು ಕಾರುಗಳ ಮಧ್ಯ ಭೀಕರ ಅಪಘಾತ, 5 ಮಂದಿ ದುರ್ಮರಣ

ಚಂದ್ರವಳ್ಳಿ ನ್ಯೂಸ್, ಆಂಧ್ರಪ್ರದೇಶ:
ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕದ 5 ಜನ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ.


ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತ ಪಟ್ಟವರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ.


ಇವರು ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿಯ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸ್​​​​ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ವಿಫ್ಟ್ ಡಿಜೈರ್‌ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫಾರ್ಚೂನರ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.


ಮೃತರಲ್ಲಿ ಮೂವರು ವಯಸ್ಕರು ಮತ್ತು ಇಬ್ಬರು ಮಕ್ಕಳು ಎಂದು ಹೇಳಲಾಗಿದೆ. ಆದೋನಿ ಕಡೆಗೆ ಪ್ರಯಾಣಿಸುತ್ತಿದ್ದ ಫಾರ್ಚೂನರ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಣ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ಪೊಲೀಸ್ ಮೂಲಗಳು ತಿಳಿಸಿರುವ ಪ್ರಕಾರ, ಅಪಘಾತ ಸಂಭವಿಸಿದಾಗ ಮೃತರು ಕರ್ನಾಟಕದವರಾಗಿದ್ದು, ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಇದೀಗ ಈ ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದ್ದು ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಹಿಂದೆಯೂ ಇಂತಹ ಅಪಘಾತಗಳು ಸಂಭವಿಸಿದೆ.

ಕರ್ನೂಲ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಬಸ್ ಅಪಘಾತದ ನಂತರ, ರಸ್ತೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಲೇ ಇವೆ, ಇದು ಪ್ರಯಾಣಿಕರಲ್ಲಿ ಕಳವಳವನ್ನುಂಟು ಮಾಡಿದೆ. ಜೀವಹಾನಿಯನ್ನು ತಪ್ಪಿಸಲು ವಾಹನ ಚಾಲಕರು ವೇಗದ ಶಿಸ್ತು ಕಾಯ್ದುಕೊಳ್ಳಲು, ಸಂಚಾರ ನಿಯಮಗಳನ್ನು ಪಾಲಿಸಲು ಮತ್ತು ವಿಶೇಷವಾಗಿ ಅಪಾಯಕಾರಿ ತಿರುವುಗಳಲ್ಲಿ ಎಚ್ಚರಿಕೆಯಿಂದ ಚಾಲನೆ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ