Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಕಲುಷಿತ ನೀರು ಸೇವಿಸಿ ಮಗು ಸೇರಿ 5 ಮಂದಿ ದಾರುಣ ಸಾವು

ಚಂದ್ರವಳ್ಳಿ ನ್ಯೂಸ್, ವಿಜಯನಗರ:
ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು
, ಮಂಗಳವಾರ ತಡರಾತ್ರಿ ಇನ್ನೂ ಮೂವರು ಗ್ರಾಮಸ್ಥರು ದಾವಣಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಕಳೆದ ಎರಡು ವಾರಗಳಿಂದ ತಂಬಿಗೇರಿ ಗ್ರಾಮದಲ್ಲಿ ಕಲುಷಿತ ನೀರು ಸಮಸ್ಯೆ ಕಾಣಿಸಿಕೊಂಡಿತ್ತು. ನೀರು ಸರಬರಾಜು ಪೈಪ್‌ಗಳಲ್ಲಿ ಕಲುಷಿತ ನೀರು ಸೇರಿತ್ತು. ಕಲುಷಿತ ನೀರು ಸೇವಿದ್ದರಿಂದ ಗ್ರಾಮದ 25 ಜನರನ್ನು ದಾವಣಗೆರೆ ಮತ್ತು ಸುತ್ತಮುತ್ತಲಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಈ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ ಅಕ್ಟೋಬರ್ 17ರಂದು ಮೊದಲ ಸಾವು ವರದಿಯಾಗಿತ್ತು. 35 ವರ್ಷದ ಸುರೇಶ್ ಭೋವಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.
ಅಕ್ಟೋಬರ್ 21ರಂದು ದಾವಣಗೆರೆಯ ಚಿಗಟೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಾಂತೇಶ ಭೋವಿ ಮೃತಪಟ್ಟಿದ್ದರು.
ಮಂಗಳವಾರ ತಡರಾತ್ರಿ ಗ್ರಾಮಸ್ಥರಾದ ಗೌರಮ್ಮ (60)
, ಹನುಮಂತಪ್ಪ(38) ಮತ್ತು 8 ತಿಂಗಳ ಮಗು ಸಹ ಸಾವನ್ನಪ್ಪಿರುವ ವರದಿಯಾಗಿದೆ.

ಈ ಎಲ್ಲ ಸಾವುಗಳು ಕುಡಿಯುವ ನೀರಿನ ಮಾಲಿನ್ಯದಿಂದ ಸಂಭವಿಸಿವೆ ಎಂದು ಲ್ಯಾಬ್ ವರದಿಗಳು ದೃಢಪಡಿಸಿವೆ.
ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಹಾಗೂ ಇತರ ಹಿರಿಯ ಅಧಿಕಾರಿಗಳು ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


ಸೋಮವಾರ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದ ವೇಳೆ ಕಲುಷಿತ ನೀರಿನ ಸಮಸ್ಯೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರಿಂದ ಪ್ರತಿಭಟನೆ ಎದುರಿಸಿದರು.

ಕಲುಷಿತ ನೀರು ಸೇವಿಸಿ ಇನ್ನೂ ನಾಲ್ವರು ಗ್ರಾಮಸ್ಥರು ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಕ್ಷಿಪ್ರವಾಗಿ ಕ್ರಮಕೈಗೊಳ್ಳಲು ವಿಫಲರಾಗಿದ್ದಾರೆ. ಈ ಸಾವಿಗೆ ಕಾರಣರಾದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ತಂಬಿಗೇರಿಯ ಗ್ರಾಮಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

 

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ