LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ

ನವದೆಹಲಿ : ಶ್ರೀಲಂಕಾದ ಮಾಜಿ ದೇಶೀಯ ಕ್ರಿಕೆಟಿಗ ಸಾಲಿಯಾ ಸಮನ್ ಅವರಿಗೆ ಐಸಿಸಿ ಭ್ರಷ್ಟಾಚಾರ ವಿರೋಧಿ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಐದು ವರ್ಷಗಳ ಕ್ರಿಕೆಟ್ ನಿಷೇಧ ವಿಧಿಸಲಾಗಿದೆ. ಈ ನಿಷೇಧ 2023ರ ಸೆಪ್ಟೆಂಬರ್ 13ರಿಂದ ಜಾರಿಗೆ ಬಂದಿದ್ದು, ಈಗಾಗಲೇ ಎರಡು ವರ್ಷಗಳ ನಿಷೇಧಾವಧಿ ಪೂರೈಕೆಯಾಗಿದೆ, ಇನ್ನುಳಿದ ಮೂರು ವರ್ಷಗಳು ಮುಂದುವರಿಯಲಿವೆ.

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಭ್ರಷ್ಟಾಚಾರ ವಿರೋಧಿ ನ್ಯಾಯಮಂಡಳಿ ಈ ವಿಚಾರಣೆಯನ್ನು ನಡೆಸಿದ್ದು, 2021 ರಲ್ಲಿ ಯುಎಇನಲ್ಲಿ ನಡೆದ ಅಬುಧಾಬಿ ಟಿ10 ಲೀಗ್​ ಪಂದ್ಯದ ವೇಳೆ ಸಲಿಯಾ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಐಸಿಸಿ ಭ್ರಷ್ಟಾಚಾರ ವಿರೋಧಿ ನ್ಯಾಯ ಮಂಡಳಿಯು ಸಮನ್ ಸೇರಿದಂತೆ ಒಟ್ಟು 8 ಮಂದಿಯನ್ನು ವಿಚಾರಣೆಗೆ ಒಳಪಡಿಸಿತ್ತು. ಅಲ್ಲದೆ ಈ ಪ್ರಕರಣದಲ್ಲಿ 8 ಮಂದಿ ಐಸಿಸಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಹೀಗಾಗಿ ಇದೀಗ ಸಲಿಯಾ ಸುಮನ್ ಅವರ ಮೇಲೆ 5 ವರ್ಷಗಳ ಕಾಲ ನಿಷೇಧ ಹೇರಲಾಗಿದೆ.

ಸಲಿಯಾ ಸಮನ್ ದೇಶೀಯ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ರೀಲಂಕಾವನ್ನು ಪ್ರತಿನಿಧಿಸುವ ಅವಕಾಶ ಹೊಂದಿದ್ದರು. ಏಕೆಂದರೆ ಲಂಕಾ ದೇಶೀಯ ಅಂಗಳದಲ್ಲಿ ಸಮನ್ 101 ಪ್ರಥಮ ದರ್ಜೆ, 77 ಲಿಸ್ಟ್ ಎ ಮತ್ತು 47 ಟಿ20 ಪಂದ್ಯಗಳನ್ನು ಆಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026