LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ಸಂಘಗಳ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಬೆಳಗಾವಿ (ಸುವರ್ಣಸೌಧ): ಕಬ್ಬು ಬೆಳೆಗಾರರ ಹಾಗೂ ಮೆಕ್ಕೆ ಜೋಳ ರೈತರ ಸಮಸ್ಯೆಗಳನ್ನು ಬಗೆಹರಿಸಿ ರೈತಪರ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರೈತ ಸಂಘಗಳ ಪ್ರತಿನಿಧಿಗಳು ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:


• ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
• ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ.
• ಸಕ್ಕರೆ ಕಾರ್ಖಾನೆಗಳು ಕಬ್ಬಿನ ತೂಕದಲ್ಲಿ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
• ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದರು.
• ನೀರಾವರಿಗೆ ವಿದ್ಯುತ್‌ ಸಮಸ್ಯೆಯಿದ್ದು, 12 ತಾಸು ನಿರಂತರ ವಿದ್ಯುತ್‌ ಪೂರೈಕೆ ಖಾತ್ರಿಪಡಿಸಬೇಕು. ಅಕ್ರಮ ಸಕ್ರಮ ಯೋಜನೆಯನ್ನು ಪುನಾರಂಭಿಸಬೇಕು. ಕಾಡುಪ್ರಾಣಿಗಳಿಂದ ಬೆಳೆ ಹಾನಿ ಪರಿಹಾರ ಧನ ಹೆಚ್ಚಿಸಬೇಕು. ರೈತರ ಉತ್ಪನ್ನಗಳ ಖರೀದಿಗೆ ಕಾರ್ಪಸ್‌ ಫಂಡ್‌ ಆರಂಭಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಪಶು ವೈದ್ಯರ ನೇಮಕ ಮಾಡಬೇಕು. ಬೆಳಗಾವಿಯಲ್ಲಿ ಆರಂಭಿಸಲಾಗಿರುವ ಸಕ್ಕರೆ ಆಯುಕ್ತರ ಕಚೇರಿಗೆ ಅಗತ್ಯ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ರೈತ ಪ್ರತಿನಿಧಿಗಳು ಮನವಿ ಸಲ್ಲಿಸಿದರು.
• ಕಬ್ಬು ಬೆಳೆಗಾರರ ಹಾಗೂ ಮೆಕ್ಕೆ ಜೋಳ ರೈತರ ಸಮಸ್ಯೆಗಳನ್ನು ಬಗೆಹರಿಸಿ ರೈತರ ಬೇಡಿಕೆಗಳನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ವಿವಿಧ ರೈತ ಸಂಘಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರನ್ನು ಸನ್ಮಾನಿಸಿದರು.

• ರೈತರಿಗೆ 7ಗಂಟೆ ಕಾಲ ನಿರಂತರ ಗುಣಮಟ್ಟದ ವಿದ್ಯುತ್‌ ಒದಗಿಸಲು ಸರ್ಕಾರ ಬದ್ಧವಾಗಿದೆ. ವಿದ್ಯುತ್‌ ಉತ್ಪಾದನೆ ಹೆಚ್ಚಾದಾಗ ವಿದ್ಯುತ್‌ ಪೂರೈಕೆ ಹೆಚ್ಚಿಸಲು ಕ್ರಮ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.

ರೈತರ ವಿಷಯದಲ್ಲಿ ಸರ್ಕಾರ ಯಾವುದೇ ಆತ್ಮವಂಚನೆ ಮಾಡುವುದಿಲ್ಲ.ನಮ್ಮ ಸರ್ಕಾರ ರೈತ ಪರ, ಎಲ್ಲಾ ಸಮಸ್ಯೆಗಳಿಗೂ ನ್ಯಾಯಯುತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವು ರೈತಪರ ಸಂಘಟನೆಗಳು ಹಾಗೂ ಕಬ್ಬು ಬೆಳೆಗಾರರು ಸಭೆಯಲ್ಲಿ ಭಾಗಿಯಾಗಿ ಸಾಧಕ ಬಾಧಕಗಳ ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ