538 ಕೋಟಿ ವಂಚನೆ ಪ್ರಕರಣ- ಜೆಟ್ ಏರ್‌ವೇಸ್ ಸಂಸ್ಥಾಪಕ ಬಂಧನ
ಮುಂಬೈ: ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಮಾಡಿದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಬಂಧನ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನರೇಶ್ ಗೋಯಲ್ ಅವರನ್ನು ವಿಚಾರಣೆಗಾಗಿ ಕರೆತಂದಿದ್ದರು. ಹಲವಾರು ತಾಸುಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿದ್ದಾರೆ. ಕಳೆದ ಜುಲೈ ತಿಂಗಳಿನಲ್ಲಿ ಇ.ಡಿ ಅಧಿಕಾರಿಗಳು ನರೇಶ್ ಅವರಿಗಾಗಿ ಸುಮಾರು ಏಳೆಂಟು ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಬ್ಯಾಂಕ್‌ಗೆ ವಂಚನೆ ಮಾಡದ ಆರೋಪದಲ್ಲಿ ಈ ವರ್ಷದ ಆರಂಭದಲ್ಲಿ ಅವರ ಮೇಲೆ ಇ.ಡಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.