ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದ ನಂತರ ಕಾಬೂಲ್ ನಲ್ಲಿ ಮನೆ ಕುಸಿದು ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಒಂದು ಮಗು ಗಾಯಗೊಂಡಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಶುಕ್ರವಾರ 5.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ಭೂವಿಜ್ಞಾನ ಸಂಶೋಧನಾ ಕೇಂದ್ರ (GFZ) ತಿಳಿಸಿದೆ.
177 ಕಿಮೀ (110 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು GFZ ತಿಳಿಸಿದೆ.
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಅಫ್ಘಾನಿಸ್ತಾನದ ಕಾಬೂಲ್ ಮತ್ತು ಭಾರತದ ರಾಜಧಾನಿ ನವದೆಹಲಿಯಲ್ಲಿ ಬಲವಾದ ಕಂಪನಗಳು ಕಂಡುಬಂದಿವೆ.
ಪರ್ವತಗಳಿಂದ ಆವೃತವಾದ ಅಫ್ಘಾನಿಸ್ತಾನವು ಹಲವಾರು ನೈಸರ್ಗಿಕ ವಿಕೋಪಗಳಿಗೆ ಗುರಿಯಾಗುತ್ತದೆ. ಇದರ ಭೂಕಂಪಗಳು ಅತ್ಯಂತ ಮಾರಕವಾಗಿದ್ದು, ಪ್ರತಿ ವರ್ಷ ಸರಾಸರಿ 560 ಜನರನ್ನು ಬಲಿ ತೆಗೆದುಕೊಳ್ಳುತ್ತದೆ.
ನವೆಂಬರ್ ನಲ್ಲಿ ದೇಶದಲ್ಲಿ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದು, ಮತ್ತು ನೂರಾರು ಮನೆಗಳು ನಾಶವಾಗಿದ್ದವು.