6 ತಿಂಗಳಲ್ಲಿ ಸರಕಾರ ಪತನ: ನಿರಾಣಿ ಭವಿಷ್ಯ.!
ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ.
ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಹಗರಣಗಳು ಒಂದಾದ ಮೇಲೊಂದರಂತೆ ಬಯಲಾಗುತ್ತಿದ್ದು, ಮಾಧ್ಯಮಗಳಲ್ಲಿ ಪ್ರತಿದಿನವೂ ಸರ್ಕಾರದ ಹಗರಣಗಳು ಬಯಲಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಡಳಿತ ಯಂತ್ರದ ಮೇಲೆ ಹಿಡಿದ ತಪ್ಪಿದೆ. ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.