LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ- ಓರ್ವ ಸಾವು, 29 ಜನರಿಗೆ ಗಾಯ

ಅಂಕಾರಾ : ಟರ್ಕಿಯ ವಾಯುವ್ಯ ಪ್ರಾಂತ್ಯ ಬಲಿಕೆಸಿರ್ ಎಂಬಲ್ಲಿ ಭಾನುವಾರ ಸಂಜೆ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಓರ್ವ ಸಾವನ್ನಪ್ಪಿ, 29 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಲಿಕೆಸಿರ್ ಪ್ರಾಂತ್ಯದ ಸಿಂದಿರಗಿಯಲ್ಲಿ 11 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಪರಿಣಾಮ 200 ಕಿ.ಮೀ. ದೂರದ ಇಸ್ತಾಂಬುಲ್ ಮತ್ತು ಇಜ್ಜಿರ್‌ನಲ್ಲೂ ಕಂಪನದ ಅನುಭವ ಆಗಿದೆ ಎಂದು ತಿಳಿದುಬಂದಿದೆ.

ಪ್ರಬಲ ಭೂಕಂಪದ ಬೆನ್ನಲ್ಲೇ ಟರ್ಕಿಯ ವಿಪತ್ತು ಮತ್ತು ತುರ್ತುಸ್ಥಿತಿ ನಿರ್ವಹಣಾ ಸಂಸ್ಥೆ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ನೆಲಕಚ್ಚಿದ ಕಟ್ಟಡಗಳನ್ನು ಪ್ರವೇಶಿಸದಂತೆ ಸೂಚನೆ ನೀಡಿದೆ.

ಸಿಂದಿರಗಿಯಲ್ಲಿ 14ಕ್ಕೂ ಅಧಿಕ ಕಟ್ಟಡಗಳು ನೆಲಸಮವಾಗಿದ್ದು, ಅವುಗಳಲ್ಲಿದ್ದ 4 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಅವಶೇಷಗಳ ಅಡಿ ಸಿಲುಕಿರುವ 2 ಮಂದಿಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 81 ವರ್ಷದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026