LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು 6 ಭಕ್ತರು ಮೃತ್ಯು

ಲಕ್ನೋ : ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಆರು ಭಕ್ತರು ಮೃತಪಟ್ಟ ಘಟನೆ ಮಿರ್ಜಾಪುರದ ಚುನಾರ್ ರೈಲ್ವೆ ನಿಲ್ದಾಣದಲ್ಲಿ ಬೆಳಗ್ಗೆ 9:30 ರ ಸುಮಾರಿಗೆ ಸಂಭವಿಸಿದೆ.

ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ ಬೆಳಗ್ಗೆ 9:30 ರ ಸುಮಾರಿಗೆ ವೇಗವಾಗಿ ಬಂದ ಕಲ್ಕಾ ಮೇಲ್ ಎಕ್ಸ್‌ಪ್ರೆಸ್ ರೈಲು 7-8 ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ. ಈ ಪೈಕಿ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಖರವಾಗಿ ಸಾವನ್ನಪ್ಪಿದವರ ಸಂಖ್ಯೆಯನ್ನು ರೈಲ್ವೆ ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

ಚೋಪನ್‌ನಿಂದ ಬಂದ ಪ್ಯಾಸೆಂಜರ್ ರೈಲಿನ ಮೂಲಕ ಭಕ್ತರು ಆಗಮಿಸಿದ್ದರು. ರೈಲು ಪ್ಲಾಟ್‌ಫಾರ್ಮ್ ಸಂಖ್ಯೆ 4 ರಲ್ಲಿ ನಿಂತಿತ್ತು. ಅವರು ಪ್ಲಾಟ್‌ಫಾರ್ಮ್ ಸಂಖ್ಯೆ 3 ಅನ್ನು ತಲುಪಲು ಹಳಿಗಳನ್ನು ದಾಟಲು ಮುಂದಾಗಿದ್ದರು. ಚುನಾರ್‌ನಲ್ಲಿ ನಿಗದಿತ ನಿಲುಗಡೆ ಇಲ್ಲದೆ ವೇಗವಾಗಿ ಬಂದ ಕಲ್ಕಾ ಎಕ್ಸ್‌ಪ್ರೆಸ್ ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರ ದೇಹಗಳು ಛಿದ್ರಗೊಂಡಿವೆ ಎಂದು ತಿಳಿದುಬಂದಿದೆ.

ಭಕ್ತರು ಕಾರ್ತಿಕ ಪೂರ್ಣಿಮೆ ಪವಿತ್ರ ಸ್ನಾನ ಮತ್ತು ಆಚರಣೆಗಳಿಗಾಗಿ ವಾರಣಾಸಿಗೆ ತೆರಳುತ್ತಿದ್ದರು. ಘಟನಾ ಸ್ಥಳದಲ್ಲಿ ರೈಲ್ವೆ ಅಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ

ಘಟನೆಯ ಬಗ್ಗೆ ಮಾಹಿತಿ ಪಡೆದ ಸಿಎಂ ಯೋಗಿ ಆದಿತ್ಯನಾಥ್, ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಬೇಕು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಸಂತ್ರಸ್ತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026