LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವು

ಸನಾ: ಯೆಮೆನ್ ಕರಾವಳಿಯಲ್ಲಿ ಭಾನುವಾರ 154 ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಜನರು ಮೃತಪಟ್ಟಿದ್ದಾರೆ. 74 ಮಂದಿ ನಾಪತ್ತೆಯಾಗಿದ್ದು, 10 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಈಗಲೂ ನಡೆಯುತ್ತಿದೆ. ರಕ್ಷಿಸಲ್ಪಟ್ಟ 10 ಜನರಲ್ಲಿ ಒಂಬತ್ತು ಮಂದಿ ಇಥಿಯೋಪಿಯನ್ ಪ್ರಜೆಗಳು ಮತ್ತು ಒಬ್ಬರು ಯೆಮೆನ್ ಪ್ರಜೆ ಸೇರಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪ್ರಾಂತ್ಯದ ಆರೋಗ್ಯ ಅಧಿಕಾರಿ ಅಬ್ದುಲ್ ಖಾದಿರ್ ಬಜಮೀಲ್ ಹೇಳಿದ್ದಾರೆ.

ರಕ್ಷಣಾ ತಂಡಗಳು ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿವೆ. 154 ಇಥಿಯೋಪಿಯನ್ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಹಡಗು ಭಾನುವಾರ ಮುಂಜಾನೆ ದಕ್ಷಿಣ ಯೆಮೆನ್ ಪ್ರಾಂತ್ಯದ ಅಬ್ಯಾನ್‌ನ ಏಡೆನ್ ಕೊಲ್ಲಿಯಲ್ಲಿ ಮುಳುಗಿತು ಎಂದು ಯೆಮೆನ್‌ನಲ್ಲಿರುವ ಅಂತಾರಾಷ್ಟ್ರೀಯ ವಲಸೆ ಸಂಸ್ಥೆಯ ಮುಖ್ಯಸ್ಥ ಅಬ್ದುಸತ್ತರ್ ಎಸೋವ್ ತಿಳಿಸಿದ್ದಾರೆ. ಆಫ್ರಿಕಾದ ಕೊಂಬು ಮತ್ತು ಯೆಮೆನ್ ನಡುವಿನ ಸಮುದ್ರ ಮಾರ್ಗದ ಅಪಾಯಗಳ ಬಗ್ಗೆ ಅಂತಾರಾಷ್ಟ್ರೀಯ ವಲಸೆ ಸಂಸ್ಥೆ ಪದೇಪದೆ ಎಚ್ಚರಿಸಿದೆ. ಹೆಚ್ಚಾಗಿ ಇಥಿಯೋಪಿಯಾ ಮತ್ತು ಸೊಮಾಲಿಯಾದಿಂದ ಬರುವ ವಲಸಿಗರು, ಸೌದಿ ಅರೇಬಿಯಾ ಅಥವಾ ಇತರ ಗಲ್ಫ್ ರಾಷ್ಟ್ರಗಳನ್ನು ಕೆಲಸ ಹುಡುಕಿಕೊಂಡು ಹೋಗುವವರು ಈ ಮಾರ್ಗದ ಮೂಲಕ ಸಂಚರಿಸುತ್ತಾರೆ. ಇದು ವಿಶ್ವದ ಅತ್ಯಂತ ಜನನಿಬಿಡ ಮತ್ತು ಅತ್ಯಂತ ಅಪಾಯಕಾರಿ ವಲಸೆ ಮಾರ್ಗಗಳಲ್ಲಿ ಒಂದಾಗಿದೆ ಎಂದು ಐಒಎಂ ಹೇಳಿಕೆಯಲ್ಲಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026