Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

7 ಲಕ್ಷ ನಗದು ಸಾಲಲಿಲ್ಲ: ಕಾರು ಬೇಡಿಕೆಗಾಗಿ ಇನ್ಸ್ಟಾ ಇನ್ಫ್ಲೂಯೆನ್ಸರ್‌ಗೆ ಕಿರುಕುಳ, ಅಂತ್ಯ ದುರಂತ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇನ್ಸ್ಟಾ ಇನ್ಫ್ಲೂಯೆನ್ಸರ್‌ ಒಬ್ಬರ ಅನುಮಾನಾಸ್ಪದ ಸಾವು ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಮೃತ ಯುವತಿಯ ಕುಟುಂಬಸ್ಥರು ಪತಿ ಹಾಗೂ ಆತನ ಕುಟುಂಬದವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಮಾನ್ಸಿ ಮೃತಪಟ್ಟ ಮಹಿಳೆ. ಆಕೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿಯ ಮನೆಯವರು ಹಲ್ಲೆ ನಡೆಸಿ ಕೊಲೆಗೈದು ಬಳಿಕ ಆತ್ಮಹತ್ಯೆಯಂತೆ ತೋರಿಸಲು ಶವವನ್ನು ನೇತುಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಮದುವೆಯ ಸಮಯದಲ್ಲಿ ಪತಿಗೆ 7 ಲಕ್ಷ ರೂ. ನಗದು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ಉಡುಗೊರೆಗಳನ್ನು ನೀಡಲಾಗಿತ್ತು. ಆದರೂ ಹೆಚ್ಚುವರಿ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡಲಾಗುತ್ತಿತ್ತು. ವಿಶೇಷವಾಗಿ ಕಾರು ಕೊಡಿಸುವಂತೆ ಒತ್ತಡ ಹೇರಲಾಗುತ್ತಿತ್ತು ಎಂದು ಕುಟುಂಬದವರು ದೂರಿದ್ದಾರೆ.

ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಾನ್ಸಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು ಎನ್ನಲಾಗಿದೆ. ಪತಿಯ ಮನೆಯಲ್ಲಿ ಅನುಭವಿಸುತ್ತಿದ್ದ ಕಿರುಕುಳದ ಬಗ್ಗೆ ಮಾನ್ಸಿ ಹಲವು ಬಾರಿ ತಮ್ಮ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದರು ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ಮಾನ್ಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿಯ ಮನೆಯವರು ಹೇಳಿಕೊಂಡಿದ್ದಾರೆ. ಆದರೆ ಇದು ಪೂರ್ವನಿಯೋಜಿತ ಕೊಲೆ ಎಂದು ಪೋಷಕರು ಆರೋಪಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಕಾನ್ಪುರ ಮೂಲದ ಮಾನ್ಸಿ 2024ರಲ್ಲಿ ಸಾಗರ್ ರಜಪೂತ್ ಅವರನ್ನು ವಿವಾಹವಾಗಿದ್ದರು. ದಂಪತಿ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಸಾಗರ್ ರಜಪೂತ್‌ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 8 ಲಕ್ಷಕ್ಕೂ ಹೆಚ್ಚು ಅನುಯಾಯಿಗಳಿದ್ದಾರೆ.

ಮಾನ್ಸಿ ಪೋಷಕರ ಲಿಖಿತ ದೂರಿನ ಆಧಾರದ ಮೇಲೆ ಸಾಗರ್ ರಜಪೂತ್ ಹಾಗೂ ಆತನ ಕುಟುಂಬದ ಐವರು ಸದಸ್ಯರ ವಿರುದ್ಧ ವರದಕ್ಷಿಣೆ ಸಾವಿನ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಸಾಗರ್ ರಜಪೂತ್, ರಾಜೇಶ್, ಅನು, ಬರ್ಖಾ, ಚಾಂದನಿ ಮತ್ತು ಆಶಾ ಅವರ ಹೆಸರನ್ನು ಆರೋಪಿಗಳಾಗಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಸಾಗರ್ ರಜಪೂತ್ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ