LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದ್ದು, 2023ನೇ ಸಾಲಿನ ಪ್ರಶಸ್ತಿಯಲ್ಲಿ ಫೀಚ‌ರ್ ಫಿಲಂನ ಪ್ರಾದೇಶಿಕ ವಿಭಾಗದಲ್ಲಿ ‘ಕಂದೀಲು’ ಹಾಗೂ ನಾನ್ ಫೀಚರ್ ವಿಭಾಗದಲ್ಲಿ ‘ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾದದ್ದು’ ಕಿರುಚಿತ್ರಕ್ಕೆ ಪ್ರಶಸ್ತಿಗಳು ದೊರಕಿವೆ.

ನಾನ್ ಫೀಚರ್ ಹಾಗೂ ಫೀಚರ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದಿರುವ ‘ಕಂದೀಲು’ ಹಾಗೂ ‘ಸೂರ್ಯಕಾಂತಿ ಹೂವಿಗೆ ಮೊದಲು ಗೊತ್ತಾದದ್ದು’ ಕಿರುಚಿತ್ರಕ್ಕೆ ರಜತ ಕಮಲ ಹಾಗೂ ಎರಡು ಲಕ್ಷ ನಗದು ಸಿಗಲಿದೆ.

ಈ ಬಾರಿ ಫೀಚರ್ ಚಿತ್ರ ವಿಭಾಗದಲ್ಲಿ ಒಟ್ಟು ನಾಲ್ಕು ಕನ್ನಡ ಚಿತ್ರಗಳು ಕೊನೆಯ ಸುತ್ತಿನವರೆಗೂ ಬಂದಿದ್ದು, ಹೇಮಂತ್ ರಾವ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’, ಯಶೋಧ ಪ್ರಕಾಶ್ ಕೊಟ್ಟುಕತ್ತೀರ ನಿರ್ದೇಶನದ ‘ಕಂದೀಲು’, ನಾಗಿಣಿ ಭರಣ ನಿರ್ದೇಶನದ ‘ಜೀನಿಯಸ್‌ ಮುತ್ತಾ’ ಹಾಗೂ ಬಡಿಗೇರ್ ದೇವೇಂದ್ರ ನಿರ್ದೇಶನದ ‘ಇನ್’ ಚಿತ್ರಗಳು ಸ್ಪರ್ಧೆಯಲ್ಲಿದ್ದು, ಈ ಪೈಕಿ ‘ಕಂದೀಲು’ ಮಾತ್ರ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.



‘ಕಂದೀಲು’ ಚಿತ್ರವನ್ನು ಯಶೋದಾ ಪ್ರಕಾಶ್ ಕೊಟ್ಟುಕತ್ತಿರಾ ನಿರ್ಮಿಸಿ-ನಿರ್ದೇಶಿಸಿದ್ದು, ಚಿತ್ರದಲ್ಲಿ ಪ್ರಭಾಕ‌ರ್ ಬ್ರಹ್ಮಾವರ, ವನಿತಾ ರಾಜೇಶ್, ಗುರು ತೇಜಸ್, ವೆಂಕಟೇಶ್ ಪ್ರಸಾದ್ ಮುಂತಾದವರು ನಟಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026