Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶ್ರೀ ಗುರು ಪೀಠ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಸುರಪುರ: ಸುರಪುರ ಪಟ್ಟಣದ ಕುಂಬಾರಪೇಟೆಯಲ್ಲಿರುವ ಶ್ರೀ ಗುರು ಪೀಠ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ತಿರುಪತಿ ಗುತ್ತೇದಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಸಂದರ್ಭದಲ್ಲಿ ಅವರು ಭಾರತದ ಸಂವಿಧಾನದ ಮಹತ್ವವನ್ನು ವಿವರಿಸಿ, 1950 ಜನವರಿ 26ರಂದು ಜಾರಿಗೆ ಬಂದ ಸಂವಿಧಾನವು ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಫಲವಾಗಿದೆ ಎಂದು ತಿಳಿಸಿದರು. ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಾತ್ರ ಅನನ್ಯವಾಗಿದ್ದು, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ಆಶಯಗಳನ್ನು ಒಳಗೊಂಡಿರುವುದು ನಮ್ಮ ದೇಶದ ಶಕ್ತಿಯಾಗಿದೆ ಎಂದರು. ವೈವಿಧ್ಯತೆಯಲ್ಲಿ ಏಕತೆ ಎಂಬ ಭಾರತದ ಮೂಲ ತತ್ವವನ್ನು ಮಕ್ಕಳಿಗೆ ಬಾಲ್ಯದಲ್ಲಿಯೇ ಅರಿವು ಮಾಡಿಕೊಡುವುದು ಅಗತ್ಯವಾಗಿದೆ ಎಂದು ಹೇಳಿದರು. ಇಂದಿನ ಮಕ್ಕಳೆ ನಾಳಿನ ಭವಿಷ್ಯದ ನಾಗರಿಕರು ಆಗಿರುವುದರಿಂದ ಮಕ್ಕಳಲ್ಲಿ ದೇಶಾಭಿಮಾನ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಗಣರಾಜ್ಯೋತ್ಸವಕ್ಕೆ ಕಳೆ ತಂದರು.


ಸಂದರ್ಭದಲ್ಲಿ ಶ್ರೀ ಗುರು ಪೀಠದ ಅಧ್ಯಕ್ಷರಾದ ರುದ್ರಪ್ಪ ದಿನ್ನಿಬಾವಿ, ಸಿದ್ದರಾಮ ಬೇವಿನಮಟ್ಟಿ, ಶಿಕ್ಷಕಿಯರಾದ ಶ್ರೀಮತಿ ಲಕ್ಷ್ಮಿ ದಿನ್ನಿಬಾವಿ, ಕು. ಈಶ್ವರಿ ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಿದ್ದರಾಮ ಅವರು ನೆರವೇರಿಸಿ, ವಂದನಾರ್ಪಣೆಯನ್ನು ಶ್ರೀಮತಿ ಲಕ್ಷ್ಮಿ ದಿನ್ನಿಬಾವಿ ಸಲ್ಲಿಸಿದರು. ಶಾಲೆಯ ಸಿಬ್ಬಂದಿ ವರ್ಗ ಹಾಗೂ ಮುದ್ದಾದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ