LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆ ಖಂಡನೀಯ'- ವಿಜಯೇಂದ್ರ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಜ್ಞಾನ ಗಂಗೆಯ ಆಲಯಗಳನ್ನು ಬರಿದು ಮಾಡಿ ಅಕ್ಷರ ದೀವಿಗೆಯನ್ನು ನಂದಿಸಲು ಹೊರಟಿದೆ. ಇದು ಅವಿವೇಕದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದರು.

9 ವಿಶ್ವವಿದ್ಯಾನಿಲಯಗಳಿಗೆ ಬೀಗ ಜಡಿಯಲು ಹೊರಟಿರುವ ಸರ್ಕಾರದ ನಡೆಯನ್ನು ಖಂಡಿಸಿ ವಿಜಯೇಂದ್ರ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯ ಕಸಿಯಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಶಿಕ್ಷಣದ ದೂರದೃಷ್ಟಿ ಹಾಗೂ ಉನ್ನತ ಶಿಕ್ಷಣದ ಹಕ್ಕು ಪ್ರತಿಯೊಬ್ಬ ವಿದ್ಯಾರ್ಥಿಗೆ ಸರಳವಾಗಿ, ಸುಲಭವಾಗಿ ದೊರೆಯಬೇಕು ಎಂಬ ಮಹತ್ವದ ಉದ್ದೇಶದಿಂದ 9 ವಿಶ್ವವಿದ್ಯಾನಿಲಯಗಳನ್ನು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತಂದಿತ್ತು.

ಇವುಗಳ ಅಭಿವೃದ್ಧಿಗಾಗಿ ಮೀಸಲಿರಿಸಬೇಕಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿಕೊಳ್ಳುವ ಕಾರಣಕ್ಕಾಗಿ ವಿವಿಗಳನ್ನು ಮುಚ್ಚಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಶಿಕ್ಷಣ ಹಾಗೂ ಅಭಿವೃದ್ಧಿ ವಿರೋಧಿಯ ಧೋರಣೆಯನ್ನು ಸಾಕ್ಷಿಕರಿಸುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಇತಿಹಾಸದಿಂದಲೂ ದಕ್ಷಿಣ ಭಾರತದಲ್ಲಿ’ ಕರ್ನಾಟಕ ರಾಜ್ಯ ಶಿಕ್ಷಣದ ಕಾಶಿ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ, ಅದಕ್ಕೆ ಹಿನ್ನಡೆಯುಂಟುಮಾಡುವ ನಿರ್ಧಾರಗಳನ್ನು ಈ ಹಿಂದಿನ ಯಾವ ಸರ್ಕಾರಗಳೂ ಕೈಗೊಂಡಿರಲಿಲ್ಲ, ಆದರೆ ಈ ಕಾಂಗ್ರೆಸ್ ಸರ್ಕಾರ ಇಂಥಾ ನಿರ್ಧಾರ ಕೈಗೊಂಡಿರುವುದು ನಿಜಕ್ಕೂ ಖಂಡನೀಯ ಕ್ರಮವಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪಡೆಯಲು ಸಂಕಷ್ಟ ಎದುರಿಸುತ್ತಿದ್ದ ವಿವಿಧ ಪ್ರದೇಶಗಳ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆರೆಯಲಾಗಿದ್ದ ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಂಡ್ಯ, ಮಹರಾಣಿ ಕ್ಲಸ್ಟರ್, ನೃಪತುಂಗ ಸೇರಿದಂತೆ ಇತರ ಹಿಂದುಳಿದ ಪ್ರದೇಶಗಳ ವಿಶ್ವವಿದ್ಯಾನಿಲಯಗಳನ್ನು ಮುಚ್ಚಿಸಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ಹಿಂದಿನ ಯೋಚನೆ ಶಿಕ್ಷಣ ವಿರೋಧಿ ನೀತಿಯ ವಿಕೃತ ನಡೆಯಾಗಿದೆ. ಈ ಕೂಡಲೇ ಸರ್ಕಾರ ತನ್ನ ಈ ನಿರ್ಧಾರವನ್ನು ಕೈ ಬಿಟ್ಟು ಈ ಒಂಬತ್ತು ವಿಶ್ವವಿದ್ಯಾನಿಲಯಗಳ ಅಸ್ತಿತ್ವವನ್ನು ಉಳಿಸಿ ಅಭಿವೃದ್ಧಿಗೆ ಸೂಕ್ತ ಅನುದಾನ ಬಿಡುಗಡೆ ಮಾಡಲಿ ಎಂದು  ವಿಜಯೇಂದ್ರ ಒತ್ತಾಯಿಸುತ್ತೇನೆ ಎಂದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ಹಡಪದ ಅಪ್ಪಣ್ಣ  ಅವರ ವಚನ.!ಚಳ್ಳಕೆರೆ: ಆನ್ ಲೈನ್ ಬೆಟ್ಟಿಂಗ್ : ಮತ್ತೆ ಇಡಿ ಅಧಿಕಾರಿಗಳ ದಾಳಿ.!ಹೊಸಕೋಟೆ , ದೇವನಹಳ್ಳಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಲಿಕ ಆಯ್ಕೆ ಪಟ್ಟಿ ಪ್ರಕಟ.!ಬುಧವಾರ ನಿನ್ನೆ ಚಿತ್ರದುರ್ಗ ಜಿಲ್ಲೆಯ ಯಾವ ಭಾಗಗಳಲ್ಲಿ ಎಷ್ಟು ಮಳೆ ಆಗಿದೆ.?ಶ್ವಾನಗಳು 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ.!ಕಾಂತಾರ ಚಾಪ್ಟರ್ 1 ಚಿತ್ರದ ವಿರುದ್ಧ ಗಂಭೀರ ಆರೋಪ ಏನು.?540 ಗಸ್ತು ಅರಣ್ಯ ಪಾಲಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.!ವಿಪಕ್ಷನಾಯಕ ಆರ್ ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ.!ಕೆಮ್ಮಿನ ಸಿರಪ್ ಸೇವಿಸಿ ಹಲವಾರು ಮಕ್ಕಳು ಸಾವುಗೆ ಕಾರಣರಾದ ಕಂಪನಿಯ ಮಾಲೀಕ ಅರೆಸ್ಟ್..!ಶ್ರೀ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳಾ ಪಟ್ಟಿ.!