LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿನ್ನದ ಗಟ್ಟಿಗಳನ್ನು ಕದ್ದ 9 ಕಾರ್ಮಿಕರ ಬಂಧನ

ಬೆಂಗಳೂರು,ಮೇ .26: ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಚಿನ್ನದ ಗಟ್ಟಿಗಳು ಮತ್ತು ಆಭರಣಗಳನ್ನು ಕದ್ದ ಆರೋಪದ ಮೇಲೆ ಒಂಬತ್ತು ಕಾರ್ಮಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ನಾಗರತ್‌ಪೇಟೆ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಚಿನ್ನದ ಕಂಪನಿಯ ಮಾಲೀಕರು ಮೇ 12 ರಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.
ದೂರಿನ ಪ್ರಕಾರ, ಕಳೆದ ಆರು ತಿಂಗಳಿನಿಂದ ಕಂಪನಿಯಲ್ಲಿ ಚಿನ್ನ ಮತ್ತು ಬೆಳ್ಳಿ ಕೆಲಸ ಮಾಡುತ್ತಿದ್ದ ಒಂಬತ್ತು ಕಾರ್ಮಿಕರು, ಮೇ 11 ರ ರಾತ್ರಿ ಆವರಣದಿಂದ ಚಿನ್ನದ ಗಟ್ಟಿಗಳು ಮತ್ತು ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ತನಿಖೆಯ ಸಮಯದಲ್ಲಿ, ಒಂಬತ್ತು ಕಾರ್ಮಿಕರು ಬೆಂಗಳೂರಿನಿಂದ ವಿಶಾಖ ಪಟ್ಟಣ ಮೂಲಕ ಪಶ್ಚಿಮ ಬಂಗಾಳಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದು ತಿಳಿದು ಬಂದಿದ್ದು, ಪೊಲೀಸರು ವಿಶ್ವಾ ಸಾರ್ಹ ಮಾಹಿತಿಯನ್ನು ಆಧರಿಸಿ ಆರೋಪಿಗಳನ್ನು ಬಂಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ, ಮೇ 13 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣದ ರೈಲ್ವೆ ನಿಲ್ದಾಣದ ಬಳಿ ಒಂಬತ್ತು ಕಾರ್ಮಿಕರನ್ನು ಕದ್ದ ಚಿನ್ನದ ಗಟ್ಟಿಗಳು ಮತ್ತು ಆಭರಣಗಳೊಂದಿಗೆ ಬಂಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಅಪರಾಧದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದು, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಕಾರಿ ತಿಳಿಸಿದ್ದಾರೆ.
ವಿವರವಾದ ವಿಚಾರಣೆಯ ಸಮಯದಲ್ಲಿ, ಆರೋಪಿಗಳು ತಮ್ಮ ಸಂಬಳವನ್ನು ನಿಯಮಿತವಾಗಿ ಪಾವತಿಸದ ಕಾರಣ ಮತ್ತು ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ಈ ಕಳ್ಳತನ ಮಾಡಿದ್ದೇವೆ ಎಂದು ಹೇಳಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಪೊಲೀಸರು ಒಟ್ಟು 618 ಗ್ರಾಂ ಚಿನ್ನದ ಗಟ್ಟಿಗಳು ಮತ್ತು ಆಭರಣಗಳ ಸೇರಿದಂತೆ 89 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST