Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 97,15,109 ಮತದಾರರು

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.28: ಬೆಂಗಳೂರು ನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 97,15,109 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ಮಾಹಿತಿ ನೀಡಿದರು.

ಇದರಲ್ಲಿ 50,24,775 ಪುರುಷ, 46,86,813 ಮಹಿಳೆ, 1,761 ಇತರೆ, 1,760 ಸೇವಾ ಮತದಾರರಿದ್ದಾರೆ. ನಗರದಲ್ಲಿ 1,43,526 ಯುವ ಮತದಾರಿದ್ದು, ಈ ಬಾರಿ ಯುವ ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು.

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ‌ ಮತದಾರರ ಪಟ್ಟಿ ಕುರಿತು ಇಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳ‌ ಜೊತೆ ಸಭೆ ನಡೆಸಿ ಸಂಪೂರ್ಣ ವಿವರಣೆ ನೀಡಿದರು.

80ಕ್ಕೂ ಹೆಚ್ಚಿನ ವಯಸ್ಸಿನ ಮತದಾರರು ಹಾಗೂ ವಿಶೇಷ ಚೇತನರಿಗೆ ಏಪ್ರಿಲ್ 29 ರಿಂದ ಮೇ 6ನೇ ತಾರೀಖಿನವರೆಗೂ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಚುನಾವಣಾಧಿಕಾರಿಗಳ ಮುಖಾಂತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ನಮ್ಮ ನಡೆ ಮತಗಟ್ಟೆಯ ಕಡೆ:

ವಿಧಾನಸಭೆ ಚುನಾವಣೆ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ 'ನಮ್ಮ ನಡೆ ಮತಗಟ್ಟೆಯ ಕಡೆ' ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಏಕ ಕಾಲಕ್ಕೆ ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಚುನಾವಣಾ ಆಯೋಗದ ಸುತ್ತೋಲೆಯಂತೆ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದ್ದು, 'ನಮ್ಮ ನಡೆ ಮತಗಟ್ಟೆಯ ಕಡೆ' ಕಾರ್ಯಕ್ರಮವನ್ನು ಏಪ್ರಿಲ್ 30 ರಂದು ಬೆಳಗ್ಗೆ 8:00 ಗಂಟೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಾಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಾಗುತ್ತದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ