ಬೆಂಗಳೂರು ನಗರದ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪ ಸಂಚಲನ ಮೂಡಿಸಿದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ, ಜೊತೆಗೆ ಮೋಮೊಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಗೋಶ್ ಹಾಗೂ ಅತುಲ್ ಎಂಬವರ ಪರಿಚಯವಾಗಿದ್ದು, ಬಳಿಕ ಮೂವರು ಸೇರಿ ಪಾರ್ಟಿ ಮಾಡಿದ್ದರು. ಪಾರ್ಟಿ ನಂತರ ಗೋಶ್ ಮತ್ತು ಅತುಲ್ ಊಟ ತರಲು ತೆರಳಿದಾಗ, ಹೈನಾಸ್ ಎಂಬಾತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.