Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಭಿನ್ನವಾಗಿ ನಡೆದ ಶಾಲಾ ಪ್ರಾರಂಭೋತ್ಸವ

ಗಣಿಕೊಪ್ಪ : ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಮಕ್ಕಳ ಗಮನ ಶಾಲೆಗೆ ಸೆಳೆಯಲು ಶಿಕ್ಷಣ ಕುರಿತು ಘೋಷವಾಕ್ಯಗಳು ಅದರ ಜೊತೆಗೆ ಟ್ರಾಕ್ಟರ್‌ಗೆ ರಿಬ್ಬನ್ ಹಾಗೂ ಬಲೂನ್‌ಗಳಿಂದ ಸಿಂಗರಿಸಿಲಾಗಿತ್ತು. ವಿಶೇಷವಾಗಿ ಗ್ರಾಮದ ಮಹಿಳೆಯರು ಕುಂಭ ಕೊಡ ಹೊತ್ತು ವಾದ್ಯ ಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಶಾಲೆಗೆ ಆಗಮಿಸಿದರು. ಗ್ರಾಮದಲ್ಲಿ ಒಂದು ಶಿಕ್ಷಣ ಜಾತ್ರೆಯ  ವಾತಾವರಣ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಜಂಟಿ ನಿರ್ದೇಶಕ ವೃಷಭೇಂದ್ರ ಮಾತನಾಡಿ ಹಳ್ಳಿಯ ಶಾಲೆಗಳು ಇನ್ನಷ್ಟು ಅಭಿವೃದ್ಧಿಯಾಗಲು ಎಲ್ಲರ ಸಹಕಾರ ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಮತ್ತು ಈ ಶಾಲೆಯಲ್ಲಿ ಶಿಕ್ಷಕರ ಮತ್ತು ಮಕ್ಕಳ ಉತ್ಸಾಹ ಹಾಗೂ ಊರಿನ ಜನರ ಸಹಕಾರ ಕಂಡು ಹರ್ಷ ವಾಗುತ್ತಿದೆ ಎಂದರು. 

ಕೇತ್ರ ಶಿಕ್ಷಣಾಧಿಕಾರಿ ಎ. ಎನ್. ಪ್ಯಾಟಿ ಮಾತನಾಡಿ, ಗಣಿಕೊಪ್ಪ ಶಾಲೆಯು ಸಾಕಷ್ಟು ಅಭಿವೃದ್ಧಿ ಹೊಂದಿದ್ದು ಒಂದು ಮಾದರಿ ಶಾಲೆಯಾಗಿ ಹೊರಹೊಮ್ಮುತ್ತಿದೆ. ಮಕ್ಕಳನ್ನು ಸೆಳೆಯಲು ಒಳ್ಳೆಯ ಶಿಕ್ಷಣದ ವ್ಯವಸ್ಥೆಯ ಜೊತೆ ಜೊತೆಗೆ ಪರಿಸರ ರಕ್ಷಣೆಗೂ ವಿಶೇಷ ಕಾಳಜಿಯನ್ನು ಈ ಶಾಲಾ ಶಿಕ್ಷಕರು. ಶಿಕ್ಷಕಿಯರು ಮಾಡುತ್ತಿರುವುದು ಹೆಮ್ಮೆಯ ಸಂಗತಿ ಇಂದಿನ ದಿನಮಾನಗಳಲ್ಲಿ ಸರಕಾರಿ ಶಾಲೆಗಳು ಎಂದರೆ ಅಸಡ್ಡೆ ಮಾಡುವ ಕಾಲದಲ್ಲಿ ಅದನ್ನು ಮೀರಿ ಈ ಶಾಲೆಯು ಬೆಳೆಯುತ್ತಿದೆ. ವಿಶೇಷವಾಗಿ ಎಲ್ಲ ಪಾಲಕರಿಗೆ ಹೂವಿನ ಸಸಿಗಳನ್ನು ಶಾಲೆಯ ಪರವಾಗಿ ನೀಡಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದರು. ಬೈಲಹೊಂಗಲ ಕ್ಷೇತ್ರ ಸಮನ್ವಯಾಧಿಕಾರಿ ರವಿ ಹಿರೇಮಠ, ಶಿಕ್ಷಣ ಸಂಯೋಜಕ ಎಸ್. ಪಿ ಯರಗಟ್ಟಿ, ಸಿಆರ್ಪಿಗಳಾದ  ಎಸ್. ಎನ್. ಮುಲ್ಲಾ, ದೈಹಿಕ ಶಿಕ್ಷಣ ಅಧಿಕಾರಿ ಕಾಂಬಳೆ, ಶಾಲೆಯ ಪ್ರಧಾನ ಗುರು ಎಂ. ಎ. ನದಾಫ್, ಸಹ ಶಿಕ್ಷಕರಾದ ಟಿ. ಬಿ. ಮಧುಭರಮಣ್ಣವರ ಶಾಲಾ ಶಿಕ್ಷಕವೃಂದ, ಎಸ್‌ಡಿಎಂಸಿ ಸದಸ್ಯರು, ಹಳೆಯ ವಿದ್ಯಾರ್ಥಿ ಬಳಗ ಹಾಗೂ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು. ಸುನಿತಾ ಬನಸಿ ಸ್ವಾಗತಿಸಿದರು, ಪ್ರೇಮಾ ಗಾಬಿ ನಿರೂಪಿಸಿದರು, ವೀಣಾ ಹಿರೇಮಠ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ