LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪ್ಪಾರ ಸಮಾಜದ ಹೆಮ್ಮೆಯ ಪುತ್ರಿಗೆ ದಕ್ಕಿದ ಚಿನ್ನದ ಪದಕ

ಮೈಸೂರು:ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದಿಂದ 5 ಚಿನ್ನದ ಪದಕ 3 ನಗದು ಬಹುಮಾನ ಪಡೆದ ಉಪ್ಪಾರ ಸಮಾಜದ ಹೆಮ್ಮೆಯ ಸುಪುತ್ರಿ ಕುಮಾರಿ ಎಂ ಸುಮಾ ಅವರಿಗೆ ಚಾಮರಾಜ ನಗರ ಜಿಲ್ಲಾ ಉಪ್ಪಾರ ಯುವಕರ ಸಂಘದ ಜಿಲ್ಲಾಧ್ಯಕ್ಷ ಎಂ ಜಯಕುಮಾರ್  ಅವರು ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ತಿಳಿಸಿದರು.

ಚಾಮರಾಜನಗರ ಜಿಲ್ಲೆಯ ತಾಲೂಕಿನ ಸರಗೂರುಮೋಳೆ ಗ್ರಾಮದ ಮಹದೇವಸ್ವಾಮಿ ಮತ್ತು ಚಂದ್ರಮ್ಮ ದಂಪತಿಯ ಮಗಳು ಪ್ರಸ್ತುತ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಯ್ಯನ ಛತ್ರ ಹೋಬಳಿ ಏಚಗಳ್ಳಿ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರಿ ಎಂ.ಸುಮಾ ಅವರು ಮೈಸೂರು ವಿವಿಯಲ್ಲಿ ಬಿಎ ಪದವಿಯಲ್ಲಿ ಭೂಗೋಳಶಾಸ್ತ್ರ, ಅರ್ಥಶಾಸ್ತ್ರ ಹಾಗೂ ಕನ್ನಡ ವಿಷಯದಲ್ಲಿ ಅತಿಹೆಚ್ಚು ಅಂಕ ಪಡೆದು 3 ಚಿನ್ನದ ಪದಕ ಪಡೆದಿದ್ದಾರೆ. ಜೊತೆಗೆ, ಬಿಎ. ಪದವಿಯಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ 2 ಚಿನ್ನ ಮತ್ತು 3 ನಗದು  ಬಹುಮಾನ ಪಡೆದುಕೊಂಡಿರುತ್ತಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಪರ್ಡ್ ಭವನದಲ್ಲಿ ನಡೆದ 104 ನೇ ಘಟಿಕೋತ್ಸವದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕುಲಪತಿಗಳಾದ ಪ್ರೊ ಲೋಕನಾಥ್ ಅವರ ಸಮ್ಮುಖದಲ್ಲಿ‌ 5 ಚಿನ್ನದ ಪದಕದ ಜೊತೆಗೆ 3 ನಗದು ಬಹುಮಾನ ಹಾಗೂ ಪದವಿ ಪ್ರಮಾಣ ಪತ್ರಗಳನ್ನು ಸ್ವೀಕರಿಸಿರುವ ಇವರಿಗೆ ಅಭಿನಂದನೆಗಳು ಹಾಗೂ ಶುಭಹಾರೈಕೆಗಳು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ತಿ ತೆರಿಗೆ ಬಾಕಿ: ಸುಸ್ತಿದಾರರ ಆಸ್ತಿಗಳನ್ನು ನಗರ ಪಾಲಿಕೆಯ ಹೆಸರಿಗೆ ಬದಲಾಯಿಸಿಕೊಳ್ಳಲು ಕ್ರಮಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ: ಉದ್ಯಾನವನ ಆಟದ ಮೈದಾನ ಸ್ವಚ್ಛಜಿಬಿಎಯಿಂದ ಬೀದಿ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಯಶಸ್ವಿನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು:ಮುಖ್ಯಮಂತ್ರಿ ಸಿದ್ದರಾಮಯ್ಯದಕ್ಷಿಣ ನಗರ ಪಾಲಿಕೆ 2026-27ನೇ ಸಾಲಿನ ಆಯವ್ಯಯ ಅಂದಾಜು ಪ್ರಸ್ತುತಿ ಪಡಿಸುವಿಕೆ ಕಾರ್ಯಕ್ರಮಕೆ ಎಸ್ ಆರ್ ಟಿ ಸಿ ಗೆ ಪ್ರತಿಷ್ಠಿತ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026ಸರ್ಕಾರ ಶಿಕ್ಷಣ, ಕಾನೂನು ವ್ಯವಸ್ಥೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆ