LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯರಿಂದ ಬೃಹತ್ ಸಾರ್ವಜನಿಕ ಮೆರವಣಿಗೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಂದ ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಾರ್ವಜನಿಕ ಮೆರವಣಿಗೆ ಆಯೋಜಿಸಲಾಗಿತ್ತು. ಅಪಾರ ಕಾರ್ಯಕರ್ತ ಸಮೂಹದ ನಡುವೆ ಸಡಗರ, ಸಂಭ್ರಮದಿಂದ ಜನ ಸಾಗರವೇ ಹರಿದು ಬಂದಿತ್ತು. ಕಾರ್ಯಕರ್ತರ ಅಮಿತೋತ್ಸಾಹ ಮೇರೆ ಮೀರಿತ್ತು. 

ರಕ್ಷಾ ರಾಮಯ್ಯ ಅವರಿಗೆ ಏಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್, ಹೊಸಕೋಟೆ ಶಾಸಕರಾದ ಶರತ್ ಬಚ್ಚೇಗೌಡ, ಬಾಗೇಪೆಲ್ಲಿ ಶಾಸಕರಾದ ಸುಬ್ಬಾರೆಡ್ಡಿ, ಗೌರಿ ಬಿದನೂರು ಶಾಸಕರಾದ ಕೆ.ಎಚ್. ಪುಟ್ಟಸ್ವಾಮಿ ಗೌಡ, ವಿಧಾನಪರಿಷತ್ ಸದಸ್ಯರಾದ ಎಸ್. ರವಿ, ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ಮತ್ತಿತರರು ಜೊತೆಯಾದರು. ತೀವ್ರ ರಾಜಕೀಯ ಒತ್ತಡದ ನಡುವೆಯೂ ರಣದೀಪ್ ಸಿಂಗ್ ಸುರ್ಜೇವಾಲ ಬಹಿರಂಗ ಸಮಾವೇಶಕ್ಕೆ ಆಗಮಿಸಿ ರಕ್ಷಾ ರಾಮಯ್ಯ ಅವರಿಗೆ ಶುಭ ಕೋರಿದರು.

ಇದಕ್ಕೂ ಮುನ್ನ ರಕ್ಷಾ ರಾಮಯ್ಯ, ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಸಚಿವರು ಹಾಗೂ ಶಾಸಕರೊಂದಿಗೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕೈವಾರ ತಾತಯ್ಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಸೀದಿಗೇ ಭೇಟಿ ನೀಡಿದರು. ಕನಕದಾಸರು ಮತ್ತು . ಕೆ.ಬಿ. ಪಿಳ್ಳಪ್ಪ ಮತ್ತು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ನಂತರ ಮೆರವಣಿಗೆಯಲ್ಲಿ ತೆರಳಿದರು.

ನಂತರ ನೆರೆದಿದ್ದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಕ್ಷಾ ರಾಮಯ್ಯ ಮಾತನಾಡಿ, ಬಿಜೆಪಿಯಿಂದ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಪಡೆಯಲು ಕೇಂದ್ರ ಮಟ್ಟದಲ್ಲಿ ಹೋರಾಟ ನಡೆಸುತ್ತೇನೆ. ಕ್ಷೇತ್ರದ ಧ್ವನಿಯಾಗಿ, ರಾಜ್ಯದ ಪರವಾಗಿ ಕೇಂದ್ರದಲ್ಲಿ ಹೋರಾಟ ಮಾಡುತ್ತೇನೆ. ಚುನಾವಣೆಯಲ್ಲಿ ಸೇವೆ ಸ್ಲಲಿಸಲು ತಮಗೆ ಅವಕಾಶ ಕಲ್ಪಿಸಬೇಕು. ಇದು ಅತ್ಯಂತ ಪ್ರಮುಖ ಚುನಾವಣೆ, ಪ್ರತಿಯೊಂದು ಮನೆಗೂ ಗ್ಯಾರೆಂಟಿ ಯೋಜನೆಗಳು ತಲುಪುತ್ತಿವೆ. ರಾಜ್ಯ ಸರ್ಕಾರಕ್ಕೆ ನಾಲ್ಕು ವರ್ಷಗಳ ಅಧಿಕಾರದ ಅವಧಿ ಇದ್ದು. ಸಂಸದರಿಗೆ ಐದು ವರ್ಷಗಳ ಅವಧಿ ಇರಲಿದೆ. ನಿಮ್ಮ ಸೇವೆಗೆ ಇದೊಂದು ಸದಾವಕಾಶ ಎಂದು ಹೇಳಿದರು.

ಬಿಜೆಪಿ ಸರ್ಕಾರಕ್ಕೆ ದಕ್ಷಿಣ ಭಾರತದ ಬಗ್ಗೆ ಒಲವಿಲ್ಲ. ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಅವರಿಗೆ ದಕ್ಷಿಣ ಭಾರತ ಬೇಕಿಲ್ಲ. ಉತ್ತರ ಭಾರತದ ಬಗ್ಗೆ ಮಾತ್ರ ವಿಶೇಷ ಅಭಿಮಾನ. ಕರ್ನಾಟಕದ ತೆರಿಗೆ ಹಣವನ್ನು ಉತ್ತರ ಪ್ರದೇಶ, ಬಿಹಾರ, ರಾಜಸ್ಥಾನಕ್ಕೆ ನೀಡುತ್ತಿದೆ. ಹೀಗಾಗಿ ರಾಜ್ಯದ ಪರ ಹೋರಾಟ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮತದಾರರೇ ಅಭ್ಯರ್ಥಿಗಳು, ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ, ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಲ್ಲಿ ಸಂವಿಧಾನ ಬದಲಿಸಲಿದೆ. ಹೀಗಾಗಿ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಹಿರಿಯ ಮುಖಂಡರಾದ ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬುವ ಕೆಲಸ ಆಗಬೇಕು ಎಂದು ಮನವಿ ಮಾಡಿದರು.

ಕೋವಿಡ್ ಸಮಯದಲ್ಲಿ ಕೋಟ್ಯಾಂತರ ಜನ ನರಳುವಂತಾಯಿತು. ರಾಜ್ಯದ ಜನತೆ ಸಹ ತೀವ್ರ ತೊಂದರೆಗೆ ಸಿಲುಕಿದರು. ಅಷ್ಟೇ ಅಲ್ಲದೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೆಚ್ಚಿನ ದಬ್ಬಾಳಿಕೆಯಾಗಿತ್ತು. ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗೆದ್ದು ಬಂದಿದ್ದವರು ವಿನಾ ಕಾರಣ ಅಮಾಯಕರ ಮೇಲೆ ಪ್ರಕರಣಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದರು. ಇದನ್ನು ಈಗ ತಪ್ಪಿಸಬೇಕಾಗಿದೆ. ಆಸ್ಪತ್ರೆಗೆ ಹೋದಾಗ ನಾವು ವೈದ್ಯರ ಧರ್ಮ ಕೇಳುವುದಿಲ್ಲ. ವಕೀಲರ ಬಳಿ ತೆರಳಿದಾಗಲೂ ಅವರ ಧರ್ಮದ ಬಗ್ಗೆ ವಿಚಾರಿಸುವುದಿಲ್ಲ. ಆದರೆ ಬಿಜೆಪಿ ಪ್ರತಿಯೊಂದರಲ್ಲೂ ಧರ್ಮದ ವಿಚಾರ ಮುಂದಿಟ್ಟುಕೊಂಡು ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಪ್ರತಿಯೊಬ್ಬರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್. ಯುವಕನಾದ ನನಗೆ ಅವಕಾಶ ಮಾಡಿಕೊಟ್ಟರೆ ನಾನು ಸದಾ ನಿಮ್ಮ ಜೊತೆ ಇರುತ್ತೇನೆ ಎಂದರು.

ಸಚಿವ ಡಾ.ಎಂ.ಸಿ. ಸುಧಾಕರ್ ಮಾತನಾಡಿ, ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟೆಗೆ 24 ಎಕರೆ ಜಮೀನು ಗುರುತಿಸಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ಹಿಂದೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರೂ ಸಹ ಚಿಕ್ಕಬಳ್ಳಾಪುರಕ್ಕೆ ಎಂ.ಆರ್.ಐ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯುದಯಕ್ಕೆ ಸರ್ಕಾರ ಬದ್ಧವಾಗಿದೆ. ಹಿಂದೆ ಬೇಜವಾಬ್ದಾರಿ ಆಡಳಿತದಿಂದ ಸಹಸ್ರಾರು ಎಕರೆ ಭೂಮಿ ನಮ್ಮ ಕೈಬಿಟ್ಟು ಹೋಗುವ ಆತಂಕ ವ್ಯಕ್ತವಾಗಿತ್ತು. ಇದೀಗ ನಮ್ಮ ಸರ್ಕಾರ ಮರು ಸರ್ವೆಗೆ ಆದೇಶ ನೀಡಿ, ಭೂಮಿ ಉಳಿಸುವ ಕೆಲಸ ಮಾಡುತ್ತಿದೆ. ಬಿಜೆಪಿಯವರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಬದಲಿಸಲು ಸಾದ್ಯವಿಲ್ಲ. ಅದಕ್ಕೆ ನಾವು ಅವಕಾಶ ನೀಡಬಾರದು ಎಂದರೆ ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಎಂದರು.

ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಬಿಜೆಪಿಯವರು ಧರ್ಮ ಧರ್ಮಗಳ ನಡುವೆ ಒಡಕು ತಂದು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ನಾವು ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡುವಂತೆ ಕೇಂದ್ರಕ್ಕೆ ಮಾಡಿದ ಮನವಿಗೆ ಸ್ಪಂದನೆ ದೊರೆಯಲಿಲ್ಲ. ಬಡವರ ಪರವಾದ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಕೇಂದ್ರ ಸರ್ಕಾರ ಗೊಬ್ಬರ, ಔಷಧಗಳ ಬೆಲೆಗಳನ್ನು ಗಣನೀಯವಾಗಿ ಏರಿಕೆ ಮಾಡಿದೆ. ಜನ ಸಾಮಾನ್ಯರು ನೆಮ್ಮದಿಯಿಂದ ಬದಕಲು ಸಾಧ್ಯವಾಗುತ್ತಿಲ್ಲ. ಯುಪಿಎ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಯೋಜನೆಗಳನ್ನು ಮತ್ತೆ ಅನುಷ್ಠಾನಗೊಳಿಸಲು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಎಂ.ಎಸ್. ರಾಮಯ್ಯ ಕುಟುಂಬ ಸಾಕಷ್ಟು ಸೇವೆ ಸಲ್ಲಿಸಿದ್ದು, ಕಷ್ಟದಲ್ಲಿರುವವರಿಗೆ ನೆರವಾಗುತ್ತಾ ಬಂದಿದೆ. ಹಿಂದುಳಿದ ಹರಿಹಾರ ದೇವರಾಜ ಅರಸು ಅವರು ಕಷ್ಟ ಕಾಲದಲ್ಲಿದ್ದಾಗ ಈ ಕುಟುಂಬ ಅವರ ನೆರವಿಗೂ ಈ ಕುಟುಂಬ ಧಾವಿಸಿತ್ತು. ರಾಜ್ಯವನ್ನಾಳಿದ ನೀವು ಚೆನ್ನಾಗಿರಬೇಕು ಎಂದು ಅರಸು ಅವರಿಗೆ ಈ ಕುಟುಂಬದವರು ಹರಸುತ್ತಿದ್ದರು. ನನ್ನನ್ನು ಹೇಗೆ ಆಶೀರ್ವದಿಸಿದ್ದೀರೋ ಅದೇ ರೀತಿ ರಕ್ಷಾ ರಾಮಯ್ಯ ಅವರನ್ನು ಸಹ ಆಶೀರ್ವಾದಿಸಿ, ಪ್ರತಿ ಕುಟುಂಬ ಸದಸ್ಯರಿಗೆ 10 ಕೆ.ಜಿ ಅಕ್ಕಿ ದೊರೆಯುತ್ತಿದೆ.

ಶಾಶ್ವತ ನೀರಾವರಿ ಜಾರಿ ಜೊತೆಗೆ ಕೆ.ಸಿ. ವ್ಯಾಲಿ ಕಣಿವೆಯಿಂದ ಬರುವ ನೀರನ್ನು ಮೂರಹೇ ಹಂತದಲ್ಲಿ ಶುದ್ದೀಕರಣ ಮಾಡಲು ಪ್ರಮಾಣಿಕ ಪ್ರಯತ್ನ ನಡೆಸುತ್ತೇವೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಸಾಧನೆಯಿಂದ ಎತ್ತಿನ ಹೊಳೆ ಯೋಜನೆ ಜಾರಿಗೆ ಬಂದಿದ್ದು, ಒಂದೆರಡು ವರ್ಷಗಳಲ್ಲಿ ನೀರು ಹರಿಯಲಿದೆ ಎಂದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಈ ಬಾರಿ ನಾವು 23 ರಲ್ಲಿ ಗೆಲ್ಲುತ್ತೇವೆ. ಕಾಂಗ್ರೆಸ್ ಗೆಲ್ಲದಿದ್ದರೆ ಗ್ಯಾರೆಂಟಿ ನಿಲ್ಲಲಿವೆ. ಹೀಗಾಗಿ ನಮಗೆ ಶಕ್ತಿ ತುಂಬಿ. ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿ. ನೀವು ನಮಗೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಸತ್ಯ, ನಿಷ್ಠೆಗೆ ಹೆಸರಾದ ಕೆ.ಪಿ. ಬಚ್ಚೇಗೌಡರ ಆಶೀರ್ವಾದ ನಮತೆ ದೊರೆತಿದೆ ಎಂದು ಪ್ರದೀಪ್ ಈಶ್ವರ್ ಹೇಳಿದರು.

ಶಾಸಕ ಕೆ.ಪಿ. ಬಚ್ಚೇಗೌಡ ಮಾತನಾಡಿ, ರಕ್ಷಾ ರಾಮಯ್ಯ ಈ ಬಾರಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲು ಪ್ರತಿಯೊಬ್ಬರ ಪರಿಶ್ರಮ ಅಗತ್ಯವಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳು ಜನಪರವಾಗಿವೆ. ಕಾಂಗ್ರೆಸ್ ಸರ್ಕಾರ ಜನರ ಹೃದಯದಲ್ಲಿದ್ದು, ಜನರ ಮನಸ್ಸಿನಲ್ಲಿದೆ. ಈ ಬಾರಿ ನಮ್ಮ ಗೆಲುವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಚಿಕ್ಕಬಳ್ಳಾಪುರ ಕ್ಷೇತ್ರ 270 ಕಿಲೋಮೀಟರ್ ಉದ್ದ ಇದ್ದು, 19 ಲಕ್ಷ ಮತದಾರರನ್ನು ಹೊಂದಿದೆ. ಎಲ್ಲರೂ ಸೇರಿ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಬೇಕು. ಪಕ್ಷದ ಕಾರ್ಯಕರ್ತರೆಲ್ಲರೂ ತಾವೇ ರಕ್ಷಾ ರಾಮಯ್ಯ ಎಂದು ಭಾವಿಸಿಕೊಂಡು ಮನೆ ಮನೆಗೆ ತೆರಳಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು. 2014 ರಲ್ಲಿ 15 ಲಕ್ಷ ರೂಪಾಯಿ ಕಪ್ಪು ಹಣವನ್ನು ಜನ ಸಾಮಾನ್ಯರ ಖಾತೆಗಳಿಗೆ ಹಾಕುವುದಾಗಿ ಬಿಜೆಪಿ ಹೇಳಿತ್ತು. 15 ಪೈಸೆಯನ್ನೂ ಸಹ ನೀಡಿಲ್ಲ.

ಜನ ಸಾಮಾನ್ಯರ ಪರವಾಗಿ ಆಡಳಿತ ಮಾಡುತ್ತಿರುವುದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸರ್ಕಾರ. ಅಂಬಾನಿ ಕುಟುಂಬದ ಮದುವೆ ನಿಶ್ಚಿತಾರ್ಥಕ್ಕೆ ಖರ್ಚು ಮಾಡಿದ್ದು 1800 ಕೋಟಿ ರೂಪಾಯಿ, ಮದುಮಗ ಧರಿಸಿದ್ದ ಗಡಿಯಾರ 40 ರೂಪಾಯಿ. ನಮ್ಮೆಲ್ಲರ ಹಣದಿಂದ ಅವರು ಮೆರೆಯುತ್ತಿದ್ದಾರೆ. ಆದರೆ ಜನ ಸಾಮಾನ್ಯರ ಆದಾಯ ದುಪ್ಪಟ್ಟು ಆಗಿಲ್ಲ. ಆದರೆ ರಸಗೊಬ್ಬರ ಬೆಲೆ ಎರಡು ಪಟ್ಟು ಏರಿಕೆಯಾಗಿದೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಎಸ್. ರವಿ ಮಾತನಾಡಿ, ಅದಾನಿ ಅವರು ಅಮಿತ್ ಶಾ ಅವರಿಗೆ ದೂರವಾಣಿ ಕರೆ ಮಾಡಿ ಸುಧಾಕರ್ ಅವರಿಗೆ ಟಿಕೆಟ್ ನೀಡುವಂತೆ ನೀಡುವಂತೆ ಶಿಫಾರಸ್ಸು ಮಾಡಿದ್ದರು. ಹೀಗಾಗಿ ಅವರಿಗೆ ಬಿಜೆಪಿ ಟಿಕೆಡ್ ದೊರೆತಿದೆ. ಇವರಿಗೆ ಜನತೆಯ ಶಿಫಾರಸ್ಸು ಇಲ್ಲ. ಇಂತಹವರು ಗೆಲ್ಲಬಾರದು. ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗ ರಾಜ್ಯಾದ್ಯಂತ ಉತ್ತಮ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರವನ್ನು ಮೈತುಂಬ ಹೊದ್ದು ಮಲಗಿರುವವರನ್ನು ಸೋಲಿಸಿ. ನಮ್ಮ ನವ ಯುವಕ, ಸಚ್ಚಾರಿತ್ರ್ಯದ ರಕ್ಷಾ ರಾಮಯ್ಯ ಗೆಲ್ಲುವುದು ಖಚಿತ ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಕ್ಷಾ ರಾಮಯ್ಯ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದರು.

ರಕ್ಷಾ ರಾಮಯ್ಯ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್, ಹೊಸಕೋಟೆ ಶಾಸಕರಾದ ಶರತ್ ಬಚ್ಚೇಗೌಡ, ಬಾಗೇಪೆಲ್ಲಿ ಶಾಸಕರಾದ ಸುಬ್ಬಾರೆಡ್ಡಿ ಜೊತೆಯಾದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳು