LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಾಡ ಹಗಲೇ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನ ಗುಂಡಿಕ್ಕಿ ಹತ್ಯೆ

ಚಂಢೀಗಢ: ಪಂಜಾಬ್‌ನ ಲೂಧಿಯಾನ ಜಿಲ್ಲೆಯ ಜಗ್ರಾಂವ್‌ನಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರನೊಬ್ಬನನ್ನು ದುಷ್ಕರ್ಮಿಗಳು ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಮೃತನನ್ನು 26 ವರ್ಷದ ತೇಜ್‌ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ.

ಈ ಭೀಕರ ಘಟನೆ ಲೂಧಿಯಾನ ಗ್ರಾಮೀಣ ವಿಭಾಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ತೇಜ್‌ಪಾಲ್ ಸಿಂಗ್ ಜಗ್ರಾಂವ್ ಸಮೀಪದ ಗಿಡ್ಡರ್‌ವಿಂಡಿ ಗ್ರಾಮದ ನಿವಾಸಿಯಾಗಿದ್ದು, ಪಂಜಾಬ್ ಪರ ಕಬಡ್ಡಿ ಪಂದ್ಯಗಳಲ್ಲಿ ರಾಷ್ಟ್ರಮಟ್ಟದಲ್ಲಿ ಹಲವು ಬಾರಿ ಆಡಿದ್ದರು ಎಂದು ತಿಳಿದುಬಂದಿದೆ.

ಪೊಲೀಸರ ಪ್ರಕಾರ, ತೇಜ್‌ಪಾಲ್ ಇಬ್ಬರು ಸ್ನೇಹಿತರೊಂದಿಗೆ ಹರಿ ಸಿಂಗ್ ಆಸ್ಪತ್ರೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಐದರಿಂದ ಆರು ಜನರಿದ್ದ ದುಷ್ಕರ್ಮಿಗಳ ಗುಂಪು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿದೆ. ಮೊದಲು ದೊಣ್ಣೆಯಿಂದ ಥಳಿಸಿದ ನಂತರ, ಅವರಲ್ಲಿ ಒಬ್ಬನು ರಿವಾಲ್ವರ್‌ನ್ನು ಹೊರತೆಗೆದು ತೇಜ್‌ಪಾಲ್ ಅವರ ಎದೆಗೆ ಗುಂಡು ಹಾರಿಸಿದ್ದಾನೆ. ದಾಳಿಯ ನಂತರ ಆರೋಪಿ ಗುಂಪು ಸ್ಥಳದಿಂದ ಪರಾರಿಯಾಗಿದ್ದು, ಗಾಯಗೊಂಡ ತೇಜ್‌ಪಾಲ್ ಅವರನ್ನು ಸ್ನೇಹಿತರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಲೀಸ್ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹಳೆಯ ದ್ವೇಷವೇ ಈ ಕೊಲೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳ ಗುರುತು ಪತ್ತೆಯಾಗಿದ್ದು, ಅವರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಎಸ್‌ಎಸ್‌ಪಿ ಅಂಕುರ್ ಗುಪ್ತಾ ತಿಳಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಘಟನೆ ನಡೆದ ಸ್ಥಳ ಜಿಲ್ಲಾಕೇಂದ್ರದಿಂದ ಸುಮಾರು 45 ಕಿಲೋಮೀಟರ್ ದೂರದಲ್ಲಿದ್ದು, ಹಾಡು ಹಗಲೇ ನಡೆದ ಈ ಹತ್ಯೆ ಸ್ಥಳೀಯರಲ್ಲಿ ಭೀತಿಯ ವಾತಾವರಣ ಉಂಟುಮಾಡಿದೆ. ರಾಷ್ಟ್ರಮಟ್ಟದ ಕಬಡ್ಡಿ ವಲಯದಲ್ಲಿಯೂ ತೇಜ್‌ಪಾಲ್ ಸಿಂಗ್ ಅವರ ಸಾವಿನ ಸುದ್ದಿ ಆಘಾತ ಮೂಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026