ಬೀದರ್: ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿಯ ಮೇಲೆ ನೆರೆ ಮನೆಯ ವ್ಯಕ್ತಿಯೇ ಅತ್ಯಾಚಾರ ಎಸಗಿರುವ ಘಟನೆ ಬೀದರ್ (Bidar) ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. 8 ವರ್ಷದ ಬಾಲಕಿಯ ಮೇಲೆ 35 ವರ್ಷದ ಧನರಾಜ್ ಕಾಂಬಳೆ ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಾಯಿ ಇಲ್ಲದ ಕಾರಣ ತಂದೆ ಕೆಲಸಕ್ಕೆ ತೆರಳಿದ್ದ ವೇಳೆ, ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಆರೋಪಿ ಕೃತ್ಯ ಎಸಗಿದ್ದಾನೆ. ಸದ್ಯ ಬಾಲಕಿಗೆ ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬಾಲಕಿಯ ತಂದೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.