Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭಗವಾನ್ ಮಹಾವೀರರ ಗೌರವಾರ್ಥವಾಗಿ ಈ ನಗರಕ್ಕೆ ಹೊಸ ಹೆಸರು 

ಕುಶಿನಗರ: ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಫಾಜಿಲ್ ನಗರವನ್ನು ಜೈನ ತೀರ್ಥಂಕರ ಭಗವಾನ್ ಮಹಾವೀರರ ಗೌರವಾರ್ಥವಾಗಿ 'ಪಾವಗಡ' ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಘೋಷಿಸಿದ್ದಾರೆ.

ಪಟ್ಟಣದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಈ ಘೋಷಣೆ ಮಾಡಿದ ಅವರು, ₹424 ಕೋಟಿಗೂ ಹೆಚ್ಚು ಮೌಲ್ಯದ 278 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಪ್ರಮಾಣಪತ್ರ, ಮಂಜೂರಾತಿ ಪತ್ರ ಮತ್ತು ಚೆಕ್‌ಗಳನ್ನು ವಿತರಿಸಿದರು.

‘ಮರು ನಾಮಕರಣವು ಭಗವಾನ್ ಮಹಾವೀರ ಮತ್ತು ಈ ಪ್ರದೇಶಕ್ಕೆ ಸಂಬಂಧಿಸಿದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವನ್ನು ಗುರುತಿಸುವ ಉದ್ದೇಶವನ್ನು ಹೊಂದಿದೆ’ ಎಂದು ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಪಾವಗಡಕ್ಕೆ ಹೊಸ ಗುರುತು: ಸಿಎಂ ಯೋಗಿ
ಈ ವೇಳೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, "ಫಾಜಿಲ್ ನಗರವನ್ನು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ನಾವು ಅನುಮೋದನೆ ನೀಡಿದ್ದೇವೆ. ಫಾಜಿಲ್ ನಗರವು ಇನ್ನು ಮುಂದೆ 'ಪಾವಗಡʼ ಎಂಬ ಹೊಸ ಗುರುತು ಪಡೆಯಲಿದೆ. ಇದಕ್ಕೆ ಭಗವಾನ್ ಮಹಾವೀರರ ಹೆಸರನ್ನು ಇಡಲಾಗುವುದು. ನಾವು ಈ ನಗರವನ್ನು ಫಾಜಿಲ್ ಎಂದು ಏಕೆ ಕರೆಯಬೇಕು?" ಎಂದು ಪ್ರಶ್ನಿಸಿದರು.

ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜೊತೆಗೆ ಪಾವಗಡ ಹೆಸರೂ ಕೂಡ ಪ್ರಸಿದ್ಧಿ ಪಡೆಯಲಿದೆ. ಪಾವಗಡವು ಶ್ರೀಮಂತ ಸಂಪ್ರದಾಯಗಳು ಮತ್ತು ಸಾಂಸ್ಕೃತಿಕ ಪರಂಪರೆಯೊಂದಿಗೆ ಜೋಡಿಸಿಕೊಳ್ಳುವ ಮೂಲಕ, ದೇಶ ಹಾಗೂ ಜಗತ್ತಿನಾದ್ಯಂತ ಜನರು ಈ ಪವಿತ್ರ ಸ್ಥಳದತ್ತ ಆಕರ್ಷಿತರಾಗುತ್ತಾರೆ ಎಂದು ಸಿಎಂ ಯೋಗಿ ಆಶಯ ವ್ಯಕ್ತಪಡಿಸಿದರು.

ಪಾವಗಡ ಹೆಸರು ಬಂದಿದ್ದು ಎಲ್ಲಿಂದ?
ಫಾಜಿಲ್ ನಗರದ ಮರುನಾಮಕರಣದ ಪ್ರಸ್ತಾವನೆಯನ್ನು ಸ್ಥಳೀಯ ಆಡಳಿತವು ಈ ಹಿಂದೆ ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಿತ್ತು. ಪ್ರಸ್ತಾವಿತ ಹೆಸರಾದ 'ಪಾವಗಡ'ದ ಹೆಸರನ್ನು ಬಿಹಾರದ ಪವಿತ್ರ ಜೈನ ಯಾತ್ರಾಸ್ಥಳ ಹಾಗೂ ಭಗವಾನ್ ಮಹಾವೀರರೊಂದಿಗೆ ನಿಕಟ ನಂಟು ಹೊಂದಿರುವ 'ಪಾವಪುರಿ'ಯಿಂದ ತೆಗೆದುಕೊಳ್ಳಲಾಗಿದೆ. ಪ್ರತಿಯೊಬ್ಬ ನಾಗರಿಕನೂ ತನ್ನ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ಉತ್ತರ ಪ್ರದೇಶದಾದ್ಯಂತ ಅಭಿವೃದ್ಧಿಯನ್ನು ಉತ್ತೇಜಿಸುವ ಜೊತೆಗೆ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದೂ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ