LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಮೃತ್ಯು

ಶಿವಮೊಗ್ಗ : ಶಿವಮೊಗ್ಗ ಮೂಲದ ವ್ಯಕ್ತಿಯೋರ್ವ ತಾನು ಮದುವೆಯಾದ ಮರುದಿನವೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಬಂಡ್ರಿ ಗ್ರಾಮದಲ್ಲಿ ನಡೆದಿದೆ.

ಹೊಸಕೊಪ್ಪ ನಿವಾಸಿ ರಮೇಶ್ (30) ಮೃತ ನವವಿವಾಹಿತ.

ನ.30 ರಂದು ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧು-ರಮೇಶ್ ವಿವಾಹ ಶಿವಮೊಗ್ಗದಲ್ಲಿ ನಡೆದಿತ್ತು. ಮದುವೆಯ ನಂತರ ಡಿ.1 ರಂದು ವಧುವಿನ ಮನೆಗೆ ತೆರಳಲು ದಂಪತಿಗಳು ಹರಪ್ಪನಹಳ್ಳಿಯ ಬಂಡ್ರಿಗೆ ಆಗಮಿಸಿದ್ದರು. ದೇವಸ್ಥಾನದಿಂದ ಮೆರವಣಿಗೆಯೊಂದಿಗೆ ಮನೆಗೆ ದಂಪತಿಯನ್ನು ಬರಮಾಡಿಕೊಳ್ಳಲಾಗಿತ್ತು.

ದಂಪತಿಗಳು ದೇವರ ದರ್ಶನಕ್ಕೆ ತೆರಳಿದ ಸಂದರ್ಭದಲ್ಲಿ ರಮೇಶ್ ಹೃದಯಾಘಾತದಿಂದ ಹಠಾತ್ ಕುಸಿದು ಬಿದ್ದಿದ್ದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮದುವೆ ಸಂಭ್ರಮದ ಮನೆಯಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026