LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಒಂದೇ ಕುಟುಂಬದ ಐವರ ದುರ್ಮಣ

 

ಗಾಂಧೀನಗರ:  ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಗಂಡ-ಹೆಂಡತಿ ಹಾಗೂ ಮೂರು ಮುದ್ದಾದ ಮಕ್ಕಳ ಒಂದೇ ದಿನ ಮೃತಪಟ್ಟಿದ್ದಾರೆ.

ಸಾಫ್ಟ್‌ವೇರ್‌ ವೃತ್ತಿಯಲ್ಲಿದ್ದ ಪ್ರತೀಕ್‌ ಜೋಶಿ ಕಳೆದ ಆರು ವರ್ಷಗಳಿಂದ ಲಂಡನ್‌ನಲ್ಲಿ ವಾಸವಾಗಿದ್ದರು. ಮೂರು ಮಕ್ಕಳು ಹಾಗೂ ಮಡದಿಯೊಂದಿಗೆ ಲಂಡನ್‌ನಲ್ಲಿ ಜೀವನ ಕಟ್ಟಿಕೊಳ್ಳುವ ಕನಸು ಕಂಡಿದ್ದರು.

ಆದರೆ, ಕೆಲವೇ ಹೊತ್ತಿನಲ್ಲಿ ಅವರ ಕನಸು ನುಚ್ಚುನೂರಾಯಿತು. ಭೀಕರ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕನನ್ನು ಹೊರತುಪಡಿಸಿ 241 ಮಂದಿ ಮೃತಪಟ್ಟರು. ಅವರಲ್ಲಿ ಈ ಕುಟುಂಬದ ಐವರು ಸೇರಿದ್ದಾರೆ.

ಮಕ್ಕಳು, ಮಡದಿಯನ್ನ ಲಂಡನ್‌ಗೆ ಕರೆಸಿಕೊಳ್ಳಲು ಹಲವು ವರ್ಷಗಳಿಂದ ಪ್ರತೀಕ್‌ ಕಾದಿದ್ದರು. ಕನಸು ಅಂತಿಮವಾಗಿ ನನಸಾಯಿತು. ಉದಯಪುರದಲ್ಲಿ ಪ್ರಸಿದ್ಧ ವೈದ್ಯೆಯಾಗಿದ್ದ ಡಾ. ಕೋಮಿ ವ್ಯಾಸ್‌ ಅವರು ಎರಡು ದಿನಗಳ ಹಿಂದಷ್ಟೇ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಪತಿ ಪ್ರತೀಕ್ ಜೊತೆ ಲಂಡನ್‌ಗೆ ಹೊರಡಲು ಸಜ್ಜಾಗಿದ್ದರು.

ಗುರುವಾರ ಬೆಳಗ್ಗೆ ಭರವಸೆ ಮತ್ತು ಉತ್ಸಾಹದೊಂದಿಗೆ ಈ ಕುಟುಂಬ, ಏರ್ ಇಂಡಿಯಾ ವಿಮಾನ 171 ಅನ್ನು ಹತ್ತಿತ್ತು. ಭಾರತದಲ್ಲಿ ತಮ್ಮ ಜೀವನದ ಕಡೆಯ ಸೆಲ್ಫಿಯನ್ನು ಕುಟುಂಬ ಕ್ಲಿಕ್ಕಿಸಿಕೊಂಡಿತ್ತು. ಆ ಸೆಲ್ಫಿಯನ್ನ ತನ್ನ ಸಂಬಂಧಿಕರಿಗೆ ಕಳಿಸಿ ಖುಷಿಪಟ್ಟಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026