LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ



ಕೊಪ್ಪಳ ಜೂನ್ 30 ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಜೂನ್ 26ರ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಪ್ರಕರಣ 29(ಎ)ರಡಿ ರಾಜಕೀಯ ಪಕ್ಷಗಳು ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ದೇಶಾದ್ಯಂತ ಚಾಲ್ತಿ ಇಲ್ಲದ ಅಥವಾ ವಿಳಾಸ ಪತ್ತೆ ಹಚ್ಚಲು ಸಾಧ್ಯವಿಲ್ಲದ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದು ಹಾಕಲು ಈ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುತ್ತದೆ.

ಅದರಂತೆ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರು ಜೂ. 27ರ ಪತ್ರದ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿ ಇರದ ಸಾಮಾನ್ಯ ಜನತಾ ಪಾರ್ಟಿ(ಲೋಕ ತಾಂತ್ರಿಕ) ಕ್ಕೆ ಸಂಬಂಧಿಸಿದಂತೆ, ಈ ಪಕ್ಷದ ವತಿಯಿಂದ 2019ರ ನಂತರ ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭೆ, ವಿಧಾನಸಭೆ ಹಾಗೂ ಉಪ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯು ಸ್ಪರ್ಧಿಸದೇ ಇರುವ ಹಿನ್ನಲೆಯಲ್ಲಿ ಪ್ರಜಾ ಪ್ರಾತಿನಿಧ್ಯಕಾಯ್ದೆ 1951ರಡಿಯಲ್ಲಿ ನೋಂದಣಿಯಾದ ರಾಜಕೀಯ ಪಕ್ಷದ ಪಟ್ಟಿಯಿಂದ ತೆಗೆದು ಹಾಕಲು ಕಾರಣ ಕೇಳುವ ನೋಟಿಸನ್ನು ಜಾರಿಗೊಳಿಸಿರುತ್ತಾರೆ.

ಆದ್ದರಿಂದ, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ "ಸಾಮಾನ್ಯ ಜನತಾ ಪಾರ್ಟಿ(ಲೋಕತಾಂತ್ರಿಕ)ಯ ಅಧಿಕೃತ ಪ್ರತಿನಿಧಿಯು ಇಚ್ಛಿಸಿದಲ್ಲಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ, ಬೆಂಗಳೂರು ಇವರಿಗೆ 2025ರ ಜುಲೈ 18 ರೊಳಗಾಗಿ ತಮ್ಮ ಲಿಖಿತ ಮನವಿಯನ್ನು ಸಲ್ಲಿಸಬಹುದು. ಪಕ್ಷದ ಪರವಾಗಿ ಮನವಿಯನ್ನು ಸಲ್ಲಿಸುವವರು ಪಕ್ಷದ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳೊಂದಿಗೆ ಮನವಿಯನ್ನು ಸಲ್ಲಿಸಬೇಕು.

ಈ ರಾಜಕೀಯ ಪಕ್ಷದ ವಿಚಾರಣೆಯನ್ನು ಜುಲೈ 18ರಂದು ನಿಗದಿಪಡಿಸಲಾಗಿದ್ದು, ವಿಚಾರಣೆಗೆ ಪಕ್ಷದ ಮುಖ್ಯಸ್ಥರು/ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಬೇಕು. ಒಂದು ವೇಳೆ ನಿಗದಿತ ಸಮಯದೊಳಗೆ ಪಕ್ಷದಿಂದ ಯಾವುದೇ ಲಿಖಿತ ಮನವಿ ಸ್ವೀಕೃತವಾದೇ ಇದ್ದ ಪಕ್ಷದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು