LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಳ್ಳಕ್ಕೆ ಬಿದ್ದ ಖಾಸಗಿ ಬಸ್; ಓರ್ವ ಸಾವು, ಐವರಿಗೆ ಗಂಭೀರ ಗಾಯ..!

ಕಾರವಾರ: ಬೆಂಗಳೂರಿನಿಂದ ಮಂಗಳೂರಿನ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲದ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆ 18 ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಬಸ್ ಅಗಸೂರಿನ ಹೆದ್ದಾರಿಯ ಬ್ರಿಡ್ಜ್ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದವರಿಗೆ ಅಂಕೋಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತನ ಗುರುತು ಪತ್ತೆಯಾಗಬೇಕಿದೆ.

ಘಟನಾ ಸ್ಥಳಕ್ಕೆ ಅಂಕೋಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಬಸ್ಸನ್ನು ಹಳ್ಳದಿಂದ ಮೇಲಕ್ಕೆತ್ತಿದ್ದಾರೆ. ಘಟನೆ ಬಗ್ಗೆ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026