LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವರುಣಾರ್ಭಟ ಕೊಟ್ಟೂರಿನಲ್ಲಿ ದಾಖಲೆಯ ಮಳೆ

ಕೊಟ್ಟೂರು: ಪಟ್ಟಣ ಸೇರಿದಂತೆ ಸುತ್ತಮುತ್ತ ಭಾನುವಾರ ತಡರಾತ್ರಿ ಸುರಿದ ಮುಂಗಾರು ಮಳೆಗೆ ಸುತ್ತಮುತ್ತಲಿನ ಬಹುತೇಕ ಹಳ್ಳಕೊಳ್ಳಗಳು ಭರ್ತಿಯಾಗಿದ್ದು, ರೈತರ ಜಮೀನುಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿದೆ.

 ಪೂರ್ವ ಮುಂಗಾರು ಆರ್ಭಟಿಸಿದ ಬೆನ್ನಲ್ಲೇ ಮುಂಗಾರು ಆರಂಭಗೊಂಡು ಕೊಟ್ಟೂರು ಪಟ್ಟಣದಲ್ಲಿ ಸುಮಾರು ಮೂರುವರೆ ಗಂಟೆಗಳ ಕಾಲ ಸುರಿದ ಜಡಿಮಳೆಯು ಬಿತ್ತನೆಗೆ ಸಿದ್ಧವಾಗಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿತು.

ಹಳ್ಳಕೊಳ್ಳ ಭರ್ತಿ:

 ಕೊಟ್ಟೂರಲ್ಲಿ 136ಮಿ.ಮೀ ಹಾಗು ಕೋಗಳಿ ಹೋಬಳಿಯಲ್ಲಿ 16ಮಿ. ಮೀ  ಮಳೆಮಾಪನ ಕೇಂದ್ರದಲ್ಲಿ ದಾಖಲಾಗಿದ್ದು, ರಾಂಪುರ ಅಲಬುರು ಹಳ್ಳಗಳು ತುಂಬಿ ಹರಿದು ರಸ್ತೆ ಸಂಪರ್ಕ ಕಡಿತಗೊಂಡಿದೆ.

 ನಾಲ್ಕು ಮನೆಗಳಿಗೆ ಭಾಗಶಃ ಹಾನಿ:

 ತಾಲೂಕು ವ್ಯಾಪ್ತಿಯ ರಾಂಪುರ ಜೋಳದ ಕೂಡ್ಲಿಗಿ ಕಾಳಾಪುರ ಗ್ರಾಮಗಳಲ್ಲಿ ಮಳೆಗೆ  ನಾಲ್ಕು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿದೆ.

 ಹೋಗಳಿ ಕನ್ನೆಹಳ್ಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು  ಸಂಪರ್ಕ ಸೇತುವೆ ಮೇಲೆ ನೀರು ಹರಿದು ಸಾರ್ವಜನಿಕ ಸಂಚಾರ ಕಡಿತಗೊಂಡಿತ್ತು.

 ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಇಟ್ಟಗಿ ರಸ್ತೆಯ ಕೆಳ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹಗೊಂಡು ಸಾರ್ವಜನಿಕ ಸಂಚಾರ ಅಡಚಣೆ ಉಂಟಾಗಿ ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ತಹಶೀಲ್ದಾರ್ ಅಮರೇಶ್ ಜಿಕೆ   ಹಾಗೂ ಲೋಕೋಪಯೋಗಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲಿಸಿದರು. ಮುಂಜಾಗ್ರತಾ ಕ್ರಮವಾಗಿ ಭಾರಿ ಮಳೆ ಬಂದ ಹಿನ್ನೆಲೆಯಲ್ಲಿ ಬೆಳಗಿನ ಜಾವದವರೆಗೂ ಪಟ್ಟಣದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಪಟ್ಟಣದ ವಿವಿಧ ಬಡಾವಣೆಗಳ ತಗ್ಗು ಪ್ರದೇಶಗಳ ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಉಂಟಾಗಿತ್ತು. ಒಟ್ಟಿನಲ್ಲಿ ಮೃಗಶಿರ ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು, ರೈತರು ಬಿತ್ತನೆಯ ಸಿದ್ಧತೆಯಲ್ಲಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು