LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ್ದ ಆರೋಪ: ಖ್ಯಾತ ನಟಿ ಬಂಧನ

ಮೀ ಟೂ ಆರೋಪ ಮಾಡಿ ಸುದ್ದಿಯಾಗಿದ್ದ ನಟಿ ಮೀನು ಮುನೀರ್ ಈಗ ‘ಮಾಂಸ ದಂಧೆ’ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.



ಯುವತಿಯೊಬ್ಬಾಕೆಯನ್ನು ವೇಶ್ಯಾವಾಟಿಕೆಗೆ ಬಲವಂತವಾಗಿ ತಳ್ಳಿದ ಆರೋಪ ಸೇರಿದಂತೆ ಇನ್ನೂ ಕೆಲವು ಆರೋಪಗಳು ನಟಿಯ ಮೇಲಿದೆ. ತಮಿಳುನಾಡು ಪೊಲೀಸರು ನಟಿ ಮೀನು ಮುನೀ‌ರ್ ಅನ್ನು ಕೇರಳದ ಅಲುವಾನಲ್ಲಿ ಬಂಧಿಸಿ ಚೆನ್ನೈಗೆ ಕರೆದುಕೊಂಡು ಬಂದಿದ್ದಾರೆ.

ತಮಿಳು ಮತ್ತು ಮಲಯಾಳಂನ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀನು ಮುನೀರ್ ತಮ್ಮದೇ ಸಂಬಂಧದ ಯುವತಿಯೊಬ್ಬಾಕೆಯನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನಿಸಿದ್ದ ಆರೋಪ ಎದುರಿಸುತ್ತಿದ್ದಾರೆ.

2014 ರಲ್ಲಿ ಈ ಘಟನೆ ನಡೆದಿದ್ದು ಈಗ ಪ್ರಕರಣ ದಾಖಲಾಗಿದೆ. ಮೀನು ಮುನೀರ್, ತನ್ನ ಹತ್ತಿರದ ಸಂಬಂಧದ ಯುವತಿಯೊಬ್ಬಾಕೆಗೆ ಸಿನಿಮಾನಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದರಂತೆ. ತಮಿಳುನಾಡಿನ ಚೆನ್ನೈನ ತಿರುಮಂಗಲಂ ಪೊಲೀಸರ ಬಳಿ ಈ ಬಗ್ಗೆ ದೂರು ದಾಖಲಾಗಿತ್ತು. ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಿಕೊಂಡಿರುವ ಅಡಿಯಲ್ಲಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಅದರನ್ವಯ ನಟಿಯನ್ನು ಬಂಧಿಸಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ವರದಿ ನೀಡಲು ಹೇಮಾ ಸಮಿತಿ ರಚಿಸಿದಾಗ ನಟಿ ಮೀನು ಮುನೀ‌ರ್ ಹಲವಾರು ಮಂದಿಯ ವಿರುದ್ಧ ಆರೋಪಗಳನ್ನು ಮಾಡಿದ್ದರು. ಬಾಲಚಂದ್ರ ಮೆನನ್‌, ಮುಖೇಶ್‌, ಮಣಿಯನ್‌ಪಿಳ್ಳ ರಾಜು, ಜಯಸೂರ್ಯ, ಎಡವಲೆ ಬಾಬು, ನಿರ್ಮಾಣ ನಿಯಂತ್ರಕ ನೋಬಲ್ ಮತ್ತು ವಿಚು ಅವರುಗಳ ಮೇಲೆ ಸಹ ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಮೀನು ಮುನೀರ್ ಮಾಡಿದ್ದರು. ಆದರೆ ಈಗ ನಟಿಯೇ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026